ವಿವಿಧ ಜಯಂತಿಗಳ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಹೊಸಪೇಟೆ (ವಿಜಯನಗರ) 30: ವಿಜಯನಗರ ಜಿಲ್ಲಾಡಳಿತ ವತಿಯಿಂದ ಜುಲೈ 2ರಂದು ಡಾ. ಫ.ಗು ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 13ರಂದು ಹಡಪದ ಹಪ್ಪಣ್ಣ ಜಯಂತಿಗಳ ಆಚರಣೆಯ ಹಿನ್ನಲೆಯಲ್ಲಿ ಪೂರ್ವಸಿದ್ಧತಾ ಸಭೆಯು ಅಪರ ಜಿಲ್ಲಾಧಿಕಾರಿಗಳಾದ ಎನ್.ಮಹೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರದಂದು ನಡೆಯಿತು.
ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ ಬಾಬು ಅವರು ಸಭೆಯಲ್ಲಿ ಮಾತನಾಡಿ, ಜು.2ರಂದು ಡಾ.ಫ.ಗು ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜು.13ರಂದು ಹಡಪದ ಹಪ್ಪಣ್ಣ ಜಯಂತಿಯನ್ನು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳು ಮತ್ತು ಅಧಿಕಾರಿಗಳು ಇದ್ದರು