ಸ್ವಾತಂತ್ರ್ಯೋತ್ಸವ ದಿನ ಅದ್ದೂರಿ ಆಚರಣೆಗೆ ನಿರ್ಧಾರ
Decision taken to celebrate Independence Day in a grand manner
ತಾಳಿಕೋಟಿ 08: ಮುಂಬರುವ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವವನ್ನು ಶಿಸ್ತುಬದ್ಧವಾಗಿ ಹಾಗೂ ವಿಜ್ರಂಭಣೆಯಿಂದ ಆಚರಿಸುವ ಸಂಬಂಧ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರಿ ತಹಸಿಲ್ದಾರ್ ಮಲ್ಲಿಕಾರ್ಜುನ ಅರಕೇರಿ ಅವರು ಸ್ವಾತಂತ್ರ್ಯೋತ್ಸವ ದಿನ ರಾಷ್ಟ್ರದ ಗೌರವದ ಸಂಕೇತವಾಗಿದ್ದು ಎಲ್ಲ ಸರ್ಕಾರಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಪರಸ್ಪರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಅಂದು ಮುಂಜಾನೆ 8:30 ಘಂಟೆಗೆ ಪಟ್ಟಣದ ಸರ್ಕಾರಿ ಕನ್ನಡ ಶಾಲೆ ಆವರಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನದ ಪ್ರಮುಖ ಕಾರ್ಯಕ್ರಮಗಳಾದ ಧ್ವಜಾರೋಹಣ, ಮಕ್ಕಳ ಸಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳ ದೇಶಭಕ್ತಿ ಗೀತೆಗಳು, ಗಣ್ಯರ ಭಾಷಣ,ನಿವೃತ್ತ ಸೈನಿಕರಿಗೆ, ಪ್ರಗತಿಪರ ರೈತರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಕುಡಿಯುವ ನೀರು, ಆಸನ ವ್ಯವಸ್ಥೆ, ಸ್ವಚ್ಛತೆ, ಪಥಸಂಚಲನ ಹಾಗೂ ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಪಟ್ಟಣದ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ನಿಯಮಾನುಸಾರ ಹಾರಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹಬ್ಬದ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಸಮರ್ಕವಾಗಿ ನಿರ್ವಹಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.
ಜಿ.ಜಿ.ಮದರಕಲ್ಲ, ಗಂಗಾಧರ ಕಸ್ತೂರಿ ಹಾಗೂ ಪ್ರಭುಗೌಡ ಮದರಕಲ್ಲ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬಿ ಕಟ್ಟಿಮನಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಸಾವಳಗಿ, ಪಿಎಸ್‌ಐ ಜ್ಯೋತಿ ಖೋತ್, ಮಾಜಿ ಸೈನಿಕ ಶ್ರೀಪಾಲ್ ಸಂಗಮಿ ಸಂಗಮಿ, ಎನ್ ಜಿಒ ಅಧ್ಯಕ್ಷ ಚೌಧರಿ, ಎಂ ಜಿ. ಪಾಟೀಲ, ಎಂ ಎಚ್ ಕೆಂಭಾವಿ,
ಸಿದ್ದನಗೌಡ ಪಾಟೀಲ ನಾವದಗಿ, ಇಬ್ರಾಹಿಂ ಮನ್ಸೂರ, ಶಶಿಧರ್ ಡಿಸಲೆ, ಅಮೀತಸಿಂಗ್ ಮನಗೂಳಿ, ನಾಗೇಶ ಕಟ್ಟಿಮನಿ, ಬಸನಗೌಡ ಮಾಲಪಾಟೀಲ, ಮೆಹಬೂಬಶಾ, ಮಕಾನದಾರ, ಮೋದಿನಾ ನಾಗಾರ್ಚಿ, ಬಬ್ಲು ಪಟೇಲ, ವಿಶ್ವನಾಥ ಪಾಟೀಲ, ನದೀಮ ಕಡು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಯ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 