ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡುವ ನಿರ್ಣಯ ಸ್ವಾಗತಾರ್ಹ: ಶ್ರೀಕಾಂತ ಸೋಮಜ್ಯಾಳ
ಸಿಂದಗಿ 23: ನಿರ್ಮಾಣ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗತ್ ಜ್ಯೋತಿ ಬಸವೇಶ್ವರರ ಹೆಸರಿಡಲು ಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹವಾಗಿದೆೆ ಎಂದು ಬಿಜೆಪಿ ಮುಖಂಡ ಶ್ರೀಕಾಂತ ಸೋಮಜ್ಯಾಳ ಹರ್ಷ ವ್ಯಕ್ತ ಪಡಿಸಿದ್ದಾರೆ.
12ನೇ ಶತಮಾನದಲ್ಲಿ ಬಸವೇಶ್ವರರು ಹನ್ನೆರಡಿ ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಜಾತಿ, ಮತ, ಲಿಂಗಗಳ ಬೇಧವನ್ನು ತಿರಸ್ಕರಿಸಿದ ಬಸವಣ್ಣನವರು ಸಮಾಜಿಕ ಕ್ರಾಂತಿಗೆ ಕಾರಣರಾದರು. ಅಂತಹ ಜಗ ಬೆಳೆಗಿದ ಮಹಾ ಮಾನವತಾವಾದಿ ಅಣ್ಣ ಬಸವಣ್ಣ ಸಾರ್ವಕಾಲಿಕ ಶರಣರಾಗಿದ್ದು, ತಮ್ಮ ವಚನಗಳ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಿ ಬದುಕು ಸಾಗಿಸಿದ್ದಾರೆ. ಅವರ ಹೆಸರು ವಿಮಾನ ನಿಲ್ದಾಣಕ್ಕೆ ಇಟ್ಟಿರುವುದು ಬಸವ ನಾಡಿನ ಶರಣರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ.