ಹೋಮ್ ಕ್ವಾರಂಟೈನ್‍ನಲ್ಲಿರುವವರು ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ: ದೀಪಾ ಚೋಳನ್
ಧಾರವಾಡ, ಮಾ.24, ಹೋಮ್ ಕ್ವಾರಂಟೈನ್‍ನಲ್ಲಿರುವವರ ಮೇಲೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ನಿಗಾ ಇಡಬೇಕು. ನಿಯಮ ಉಲ್ಲಂಘಿಸಿ ಮನೆಗಳಿಂದ ಹೊರ ಬಂದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರ್ಕಾರದ ಮುಖ್ಯಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಜಿಲ್ಲಾ ಆರೋಗ್ಯ ಕಾರ್ಯಪಡೆಯ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಶಂಕಿತ ಕೊರೊನಾ ಲಕ್ಷಣಗಳಿರುವವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅವರ ಮನೆ ಬಾಗಿಲಿಗೆ ಪೋಸ್ಟರಗಳನ್ನು ಅಂಟಿಸಿ, ಕೈಗಳ ಮೇಲೆ ಮೊಹರು ಹಾಕುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದ ಅವರು ಸರ್ಕಾರದಿಂದ ಬರುವ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಎಲ್ಲ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು. ಕೊರೋನಾ ವೈರಸ್ ನಿಯಂತ್ರಣ ಕೋಶದಲ್ಲಿ ದೂರುಗಳನ್ನು ಸ್ವೀಕರಿಸುವ ಮತ್ತು ಪರಿಹರಿಸುವ ಕಾರ್ಯ ಚುರುಕಾಗಬೇಕು ಎಂದರು.
ಸಮುದಾಯಗಳಲ್ಲಿ ರೋಗ ಹರಡುವುದನ್ನು ತಡೆಯಲು ಮಾನವ ಸಂಪನ್ಮೂಲ ಮತ್ತು ಸಾಮಗ್ರಿಗಳ ನಿರ್ವಹಣೆ ಮುಖ್ಯವಾಗಿದೆ. ಕೊರೊನಾ ಕುರಿತು ಹರಡುವ ವದಂತಿಗಳನ್ನು ಆಗಿಂದಾಗ್ಗೆ ನಿಯಂತ್ರಿಸಿ ಸುಳ್ಳು ಮಾಹಿತಿಗಳನ್ನು ನಂಬಬಾರದು. ಸರ್ಕಾರದ ವಿವಿಧ ಇಲಾಖೆಗಳ ವೆಬ್‍ಸೈಟ್‍ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡು ಸ್ಪಷ್ಟಿಕರಣ ನೀಡಬೇಕು ಎಂದರು.
ಕೋವಿಡ್-19 ಪಾಸಿಟಿವ್ ಹೊಂದಿರುವ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹಾಗೂ 2ನೇ ಹಂತದ ಸಂಪರ್ಕ ಹೊಂದಿದವರು ಮತ್ತು ವಿದೇಶಗಳಿಂದ ಆಗಮಿಸಿರುವ ಜನರ ಚಲನ ವಲನಗಳಿಗೆ ಅವಕಾಶ ನೀಡದೆ ಪ್ರತಿ ದಿನ ಅವರ ಹೋಮ್ ಕ್ವಾರಂಟೈನ್ ಕುರಿತು ನಿಗಾ ಇಟ್ಟು ಖಚಿತಪಡಿಸಿಕೊಳ್ಳಬೇಕು. ಈ ಕಾರ್ಯಕ್ಕೆ ಆರೋಗ್ಯ ಇಲಾಖೆಯ ಜೊತೆಗೆ ಬೇರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.
ಕಿಮ್ಸ್ ಸಂಸ್ಥೆಗೆ ಕರ್ತವ್ಯಕ್ಕೆ ಆಗಮಿಸುವ ಸಿಬ್ಬಂದಿಯ ಸೌಕರ್ಯಕ್ಕಾಗಿ ಜಿಲ್ಲಾಡಳಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಿದೆ. ಆರೋಗ್ಯ ಇಲಾಖೆಗೂ ವಾಹನಗಳನ್ನು ನೀಡಲಾಗುವುದು. ಪ್ರತಿ ದಿನ ಆ ವಾಹನಗಳನ್ನು ಮಹಾನಗರ ಪಾಲಿಕೆಯವರು ಶುಚಿಗೊಳಿಸಿಕೊಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್ ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ ಚವ್ಹಾಣ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 