’83’ ಸಿನಿಮಾ ಬಿಡುಗಡೆಗೂ ಮುನ್ನ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ದೀಪಿಕಾ ಭೇಟಿ
ಮುಂಬೈ: ಡಿ, 24 ಛಪಾಕ್ ಚಿತ್ರದ ಮೂಲಕ ನಿರ್ಮಾಪಕಿಯಾಗಿರುವ ನಟಿ ದೀಪಿಕಾ ಪಡುಕೋಣೆ, ಇದೀಗ ಪತಿ ರಣವೀರ್ ಸಿಂಗ್ ಜೊತೆ ’83’ ಸಿನಿಮಾದಲ್ಲಿ ನಟಿಸಿದ್ದಲ್ಲದೇ ಚಿತ್ರಕ್ಕೆ ಸಹ- ನಿರ್ಮಾಪಕಿ ಕೂಡ ಆಗಿದ್ದಾರೆ.
ದೀಪಿಕಾ ’83’ ಸಿನಿಮಾ ಬಿಡುಗಡೆಗೂ ಮುನ್ನ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ’83’ ಸಿನಿಮಾ ಚಿತ್ರಮಂದಿರಗಳಲ್ಲಿ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ದೀಪಿಕಾ ಅವರು ಭದ್ರತೆಯ ನಡುವೆ ದೇವಸ್ಥಾನಕ್ಕೆ ತೆರಳಿದ್ದಾರೆ. ’83’ ಸಿನಿಮಾದಲ್ಲಿ ಕಪಿಲ್ ದೇವ್ ಅವರ ಪತ್ನಿ ರೋಮಿ ಭಾಟಿಯಾ ಪಾತ್ರದಲ್ಲಿ ದೀಪಿಕಾ ನಟಿಸಿದ್ದಾರೆ.
ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ’83’ ಹೊಂದಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರವು ತೆರೆಕಂಡಿದೆ.
ದೀಪಿಕಾ ಅವರ ಮುಂಬರುವ ಯೋಜನೆಗಳು:
83 ಚಿತ್ರವನ್ನು ನಿರ್ಮಿಸಿ, ನಟಿಸುವುದರ ಜೊತೆಗೆ ದೀಪಿಕಾಗೆ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. ಅವುಗಳಲ್ಲಿ ಕೆಲವೆಂದರೇ, ಅವರು ಮಹಾಭಾರತದಲ್ಲಿ ದ್ರೌಪದಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ನಾಗ್ ಅಶ್ವಿನ್ ಅವರ ಪ್ರಾಜೆಕ್ಟ್ ಕೆ, ದಿ ಇಂಟರ್ನ್ ರೀಮೇಕ್, ಪಠಾಣ್, ಫೈಟರ್ ಚಿತ್ರಗಳು ಅವರ ಕೈಯಲ್ಲಿವೆ.