ಕೂಲಿ ಕಾರ್ಮಿಕರ ವೇತನ ಪಾವತಿ ವಿಳಂಬ : ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ 22: ವಿಬಿಜಿ ರಾಮ್ ಜಿ ಅಡಿಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸಲು ವಿಳಂಬ ಆಗುತ್ತಿರುವುದರಿಂದ ಕಾರ್ಮಿಕರ ಜೀವನ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಷಬ್ಬೀರ್ ಭಾಷಾ ಅಸಮಧಾನ ವ್ಯಕ್ತಪಡಿಸಿದರು.ತಾಲ್ಲೂಕಿನ ಹಿರೇಹಡಗಲಿ ಕೂಲಿ ಕಾರ್ಮಿಕರ ಸಂಘಟನೆ ಮಂಗಳವಾರ ಪ್ರತಿಭಟನೆ ಮಾಡಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಕೇಂದ್ರ ಸರ್ಕಾರದ ಹೊಸ ಕಾನೂನಿನ ತಾಂತ್ರಿಕ ತೊಡಕಿನಿಂದಾಗಿ ಓಒಖ ಕೂಲಿ ಎರಡು ತಿಂಗಳು ತಡ ಮಾಡಿದ್ದು, ಪರಿಹಾರ ಭತ್ಯೆ ಕೊಡಬೇಕು ಎಂದು ಕಾರ್ಮಿಕ ಸಂಘಟನೆ ಒತ್ತಾಯಿಸಿದೆ. ಹಾಗಾಗಿ ಕೂಲಿ ನಂಬಿ ಬದುಕುವ ಕೆಲಸಗಾರರ ಪರಿಸ್ಥಿತಿ ಹೇಳ ತೀರದಂತಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ 50ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಭಾಗವಹಿಸಿದ್ದರು.