ಕಾಗವಾಡ

ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಬಿಡುಗಡೆಗೆ ಹರ್ಷ

ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಬಿಡುಗಡೆಗೆ ಹರ್ಷ

ಕಾಗವಾಡ 08: ಕನರ್ಾಟಕ ರಾಜ್ಯ ಸರಕಾರಿ ನೌಕರರಿಗೆ ಜು .01 ರಿಂದ ಬಾಕಿ ಇದ್ದ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ಕರ್ನಾಟಕ  ರಾಜ್ಯ ಸರಕಾರಿ ನೌಕರರ ಸಂಘವು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿ ಶೇಕಡ 3.75 ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಿ ಮೂಲ ವೇತನದ ಶೇ. 27.25 ರಿಂದ ಶೇ. 31 ಹೆಚ್ಚಳ ಮಾಡಲಾಗಿದೆ. ಈ ತುಟ್ಟಿಭತ್ಯೆಯನ್ನು ಜು.01ರಿಂದ ಪೂವರ್ಾನ್ವಯವಾಗಿ ಜಾರಿಗೆ ಬರುವಂತೆ ಮಂಜೂರು ಮಾಡಿ ಸರ್ಕಾರ  ಆದೇಶ ಹೊರಡಿಸಿದೆ ಎಂದು ಕಾಗವಾಡ ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಗೌಡಪ್ಪ ಸಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20 ಲಕ್ಷ ಸರಕಾರಿ ನೌಕರರು, ನಿಗಮ-ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3 ಲಕ್ಷ ನೌಕರರು ಹಾಗೂ 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ಸಂಘವು ಸಲ್ಲಿಸಿದ ಮನವಿಗೆ 24 ಗಂಟೆಯೊಳಗೆ ಸ್ಪಂದಿಸಿ ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುವ ಮುಖ್ಯಮಂತ್ರಿಗಳಿಗೆ, ಸರಕಾರದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ, ಇದಕ್ಕಾಗಿ ಶ್ರಮಿಸಿದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ರವರಿಗೆ ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳಿಗೆ ಕಾಗವಾಡ ತಾಲೂಕು ರಾಜ್ಯ ಸರಕಾರಿ ನೌಕರರ ಪರವಾಗಿ ಸಂಘ ಧನ್ಯವಾದಗಳನ್ನು ಸಲ್ಲಿಸುತ್ತದೆ ಎಂದು ರಾಜ್ಯ ಪರಿಷತ್ ಸದಸ್ಯ ಪ್ರವೀಣ ಹುಣಸಿಕಟ್ಟಿ, ಖಜಾಂಚಿ ಗೌತಮ ಶಿರಗಾಂವೆ, ಕಾರ್ಯದರ್ಶ  ಶಿವಕುಮಾರ ಹರ್ತ  ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ 

ಸುದ್ದಿ ಓದಿ