ಇಲಾಖೆ ಯೋಜನೆಗಳನ್ನು ರೈತರಿಗೆ ತಲುಪಿಸಿ: ಶಾಸಕ ಅಶೋಕ ಮನಗೂಳಿ
Deliver departmental projects to farmers: MLA Ashok Managuli
ಸಿಂದಗಿ 03: ಇಲಾಖೆಯ ಯೋಜನೆಗಳನ್ನು ರೈತರ ಮನೆಬಾಗಿಲಿಗೆ ತಲುಪಿಸಬೇಕು. ರೈತರ ಹಿತ ಕಾಪಾಡುವಲ್ಲಿ ನಮ್ಮೇಲ್ಲರ ಜವಾಬ್ದಾರಿಯಿದೆ. ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂಧಿಸಿ ಸಲಹೆ ನೀಡಬೇಕು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ರೈತರಿಗೆ ನೀಡಬೇಕು. ರೈತರಿಗೆ ಜಾಗೃತಿ ಮುಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೃಷಿ ಹೊಂಡ ಸೇರಿದಂತೆ ರೈತರಿಗೆ ಅಗತ್ಯ ಬೇಡಿಕೆಗಳ ಕುರಿತು ಮಾಹಿತಿ ಮೇಲಧಿಕಾರಿಗಳಿಗೆ ನಿಡಬೇಕು. ಒಂದು ಪ್ರತಿ ನನಗೆ ನೀಡಬೇಕು ಎಂದು ಹೇಳಿದರು.
ಇತ್ತೀಚೆಗೆ ಸುರಿದ ಸತತ ಮಳೆಯಿಂದ ಹಾನಿಯಾದ ಬೆಳೆಗಳ ಬಗ್ಗೆ ಸರ್ವೆ ಮಾಹಿತಿ ನಿಡಬೇಕು. ಭೀಮಾ ನದಿ ಅತಿವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳ ಬಗ್ಗೆ ಜಂಟಿ ಸಮಿಕ್ಷೆ ಮಾಡಿ ವರದಿ ಸಲ್ಲಿಸಬೇಕು. ಬೆಳೆ ವಿಮಾ ಕಂಪನಿ ಅಧಿಕಾರಿಗಳು, ರೈತರೊಂದಿಗೆ ಇಲಾಖೆಯ ಅಧಿಕಾರಿಗಳು ಸಬೆ ನಡೆಸಬೇಕು. ಬೆಳೆ ವಿಮಾ ಬಗ್ಗೆ ರೈತರಲ್ಲಿ ಜಾಗೃತಿ ಮುಡಿಸಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳಾದ ಕೃಷಿ ಯಾಂತ್ರಿಕರಣ ಮತ್ತು ಕೃಷಿ ಸಿಂಚಾಯಿ ಯೋಜನೆ (ಮೈಕ್ರೋ ಇರ್ರಿಗೇಷನ್) ಭೌತಿಕ ಮತ್ತು ಆರ್ಥಿಕ ಪರೀಶೀಲನೆ ಮಾಡಿ ಹೆಚ್ಚುವರಿ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲು ಸೂಚಿಸಿದರು. ಇದೆ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ವಿವಿಧ ಕಾರ್ಯಕ್ರಮ ಆರ್ಥಿಕ ಮತ್ತು ಭೌತಿಕ ಪರೀಶೀಲನೆ ಮಾಡಿದರು.
ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಡಾ.ಎಚ್.ವಾಯ್. ಸಿಂಗೆಗೋಳ ಮಾತನಾಡಿ, ಸಿಂದಗಿ ಮತ್ತು ಆಲಮೇಲ ತಾಲೂಕಿನಲ್ಲಿ ಬಿತ್ತನೆಯಾದ ವಿವಿಧ ಬೆಳೆಗಳ ಮಾಹಿತಿ ನೀಡಿದರು. ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ದಾಸ್ತಾನು ಮಾಡಿರುವ ಬಗ್ಗೆ ಪರೀಶೀಲನೆ ನಡೆಸಲು ಬೆಳಗಾವಿ ವಿಭಾಗದ ಜಾಗೃತದಳದ ಅಧಿಕಾರಿಗಳೊಂದಿಗೆ ಕೃಷಿ ಅಧಿಕಾರಿಗಳು ಸಿಂದಗಿ ಮತ್ತು ಆಲಮೇಲ ತಾಲೂಕಿನ ರಸಗೊಬ್ಬರ ಮಾರಾಟಗಾರರ ಮಳಿಗೆ ಹಾಗೂ ದಾಸ್ತಾನು ಗೋದಾಮುಗಳಿಗೆ ಬೇಟಿ ಪರೀಶೀಲನೆ ಮಾಡಲಾಗಿದೆ. ರಸಗೊಬ್ಬರದ ಅಭಾವ ಸೃಷ್ಠಿ ಆಗದಂತೆ ಮಾರಾಟಗಾರರಿಗೆ ಸೂಚಿಸಲಾಗಿದೆ. ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆ ಬಾರದ ರೀತಿಯಲ್ಲಿ ನಿರ್ವಹಣೆ ಮಾಡಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ಸತತ ಮಳೆಯಿಂದ ಬೆಳೆದ ಬೆಳೆಗಳಿಗೆ ರೋಗ ತಗಲುವ ಮುಂಚಿತವಾಗಿ ರೈತರಿಗೆ ಜಾಗೃತಿ ಮುಡಿಸಲಾಗಿದೆ. ನ್ಯಾನೋ ರಸಗೊಬ್ಬರವನ್ನು ಬಳಕೆ ಮಾಡಲು, ಓಷಧಿ ಸಿಂಪಡಣೆಯಲ್ಲಿ ಡ್ರೋಣ ಬಳಕೆ, ಬೆಳೆ ವಿಮೆ ಸೇರಿದಂತೆ ಇಲಾಖೆಯ ಯೋಜನೆಗಳ ಕುರಿತು ರೈತರಿಗೆ ಜಾಗೃತಿ ಮುಡಿಸಲಾಗಿದೆ ಎಂದು ಇಲಾಖೆಯ ಸಮಗ್ರ ಮಾಹಿತಿ ತಿಳಿಸಿದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸಚಿನ ಉಟಗಿ ಮಾತನಾಡಿ, 2025- 26ನೇಸಾಲಿನ ಮುಂಗಾರು ಹಂಗಾಮಿನ ದಾಳಿಂಬೆ, ಲಿಂಬೆ ಮತ್ತು ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕುರಿತು ರೈತರಿಗೆ ಮಾಹಿತೀನೀಡಲಾಗಿದೆ. ತೋಟಗಾರಿಕೆ ಇಲಾಖೆ ಮೂಲಕ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದ್ದು, ಆಸಕ್ತ ರೈತರಿಗೆ ತಾಂತ್ರಿಕ ಮಾಹಿತಿ ನೀಡಲಾಗುತ್ತಿದೆ. ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ. ಅಲ್ಲದೇ ತೋಟಗಾರಿಕೆ ಇಲಾಖೆಯ ಯೋಜನೆಗಳನ್ನು ಫಲಾನುಭವಿ ರೈತರಿಗೆ ತಲುಪಿಸಲಾಗುತ್ತಿದೆ ಎಂದು ಇಲಾಖೆಯ ಪ್ರಗತಿಯ ಕುರಿತು ಸಮಗ್ರ ಮಾಹಿತಿ ನೀಡಿದರು.
ಜಿಲ್ಲಾ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ, ತಾಲೂಕಾ ಕೆಡಿಪಿ ಸದಸ್ಯ ಗಂಗಾಧರ ಚಿಂಚೋಳ್ಳಿ, ಕೃಷಿ ತಾಂತ್ರಿಕ ಅಧಿಕಾರಿ ಶಿವಾನಂದ ಹೂವಿನಹಳ್ಳಿ, ಎಲ್.ಆರ್. ರಾಠೋಡ, ಆಲಮೇಲ ಕೃಷಿ ಅಧಿಕಾರಿ ಅನಿಲದೇವ ದಶವಂತ, ಆರ್.ಡಿ. ಚವ್ಹಾಣ, ಅಧಿಕ್ಷಕ ಶಿವಣ್ಣ ಗೊಂಗಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಚಿದಾನಂದ ಬೂದಿಹಾಳ ಸೇರಿದಂತೆ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 