ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾಗಿ ತಲುಪಿಸಿ: ಅಧಿಕಾರಿಗಳಿಗೆ ರಾಜು ಕಾಗೆ ಎಚ್ಚರಿಕೆ
Deliver government schemes to beneficiaries properly: Raju Kage warns officials
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾಗಿ ತಲುಪಿಸಿ: ಅಧಿಕಾರಿಗಳಿಗೆ ರಾಜು ಕಾಗೆ ಎಚ್ಚರಿಕೆ
ಕಾಗವಾಡ 27: ರಾಜ್ಯ ಸರ್ಕಾರವು ರೈತರು ಹಾಗೂ ಬಡವರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅಧಿಕಾರಿಗಳು ಸಮರ್ಕವಾಗಿ ಅರ್ಹ ಪಲಾನುಭವಿಗಳಿಗೆ ಒದಗಿಸುವ ಕೆಲಸ ಮಾಡಬೇಕೆಂದು ಎಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ್ದಾರೆ. ಅವರು, ಸೋಮುವಾರ ದಿ. 27 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ಕೆಡಿಪಿ ಸಭೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡುತ್ತಿದ್ದರು. ಸರ್ಕಾರದ ಯೋಜನೆಗಳು ಅರ್ಹ ಬಡ ಜನರಿಗೆ ತಲುಪದೇ ಉಳ್ಳವರ ಪಾಲಗುತ್ತಿದ್ದು, ಇದನ್ನು ಅಧಿಕಾರಿಗಳು ಸರಿಪಡಿಸಿ, ನೈಜ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಆಗದಂತೆ ಹೆಚ್ಚಿನ ದಾಸ್ತಾನು ಮಾಡಿ ಅನುಕೂಲ ಮಾಡಬೇಕು. ಸಭೆಯಲ್ಲಿ ದ್ರಾಕ್ಷಿ ಬೆಳೆ ಹಾನಿಯ ಬಗ್ಗೆ ಸಮರ್ಕವಾಗಿ ಮಾಹಿತಿ ನೀಡದ ತೋಟಗಾರಿಕೆ ಅಧಿಕಾರಿ ರೇಖಾ ಹಳ್ಳೂರ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಯಾಕೆ ಬರುತ್ತಿರಾ..? ಎಂದು ಪ್ರಶ್ನಿಸಿದ್ದಾರೆ.
ಕೃಷಿ ಇಲಾಖೆದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ಬಗ್ಗೆ ಗೊಬ್ಬರಗಳು ಬಗ್ಗೆ ವಿಸ್ತಾರವಾದ ಮಾಹಿತಿ ಕೃಷಿ ಅಧಿಕಾರಿ ನಿಂಗಪ್ಪ ಬಿರಾದರ ನೀಡಿದರು. ತಾಲೂಕಾ ಪಂಚಾಯಿತಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ತಾಲೂಕಿನ ಎಂಟು ಗ್ರಾಮ ಪಂಚಾಯಿತಿಗಳ ಪ್ರಗತಿ ಬಗ್ಗೆ ಮತ್ತು ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ ರವೀಂದ್ರ ಹಾದಿಮನಿ ಕಂದಾಯ ಇಲಾಖೆಯ ಎಲ್ಲಾ ಮಾಹಿತಿ ನೀಡಿದರು. ಈ ಸಮಯದಲ್ಲಿ ಅಥಣಿ ತಹಶೀಲ್ದಾರ ಸಿದರಾಯ ಭೋಸಗಿ, ಕಾಗವಾಡ ತಹಶೀಲ್ದಾರ ರವೀಂದ್ರ ಹಾದಿಮನಿ, ಕಾಗವಾಡ ತಾ.ಪಂ. ಇಓ ವೀರಣ್ಣಾ ವಾಲಿ, ನೀರಾವರಿ ಇಲಾಖೆ ಅಧಿಕಾರಿ ಪ್ರವೀಣ ಹುಣಸಿಕಟ್ಟಿ, ಅಥಣಿ ತಾ.ಪಂ. ಇಓ ಶಿವಾನಂದ ಕಲ್ಲಾಪೂರ, ಮಲ್ಲಿಕಾರ್ಜುನ ಮಗದುಮ್ಮ, ಬಿಇಒ ಪಾಂಡುರಂಗ ಮದಭಾವಿ, ಅರಣ್ಯ ಇಲಾಖೆಯ ರಾಕೇಶ ಅರ್ಜುನಾವಾಡ, ಮಹಾಂತೇಶ ಕವಲಾಪೂರ, ಅಶೋಕ ಸತಿಗೌಡರ, ರವೀಂದ್ರ ಮುರಗಾಲಿ, ಮಲ್ಲಿಕಾರ್ಜುನ ನಾಮದಾರ, ಕೆ.ಕೆ. ಗಾವಡೆ, ಸೇರಿದಂತೆ ಅಥಣಿ-ಕಾಗವಾಡ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 