ವಿಜಯಪುರ

ವಿಜಯಪುರಕ್ಕೆ 371(ಜೆ) ಮೀಸಲಾತಿಗೆ ಆಗ್ರಹ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮನವಿ

ವಿಜಯಪುರಕ್ಕೆ 371(ಜೆ) ಮೀಸಲಾತಿಗೆ ಆಗ್ರಹ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮನವಿ

ಲೋಕದರ್ಶನ ವರದಿ 


ವಿಜಯಪುರ 08 : ವಿಜಯಪುರ ಜಿಲ್ಲಾ 371(ಜೆ ) ಹೋರಾಟ ಸಮಿತಿ ಮುಖಂಡರು  ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿಗೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು. 371(ಜೆ ) ಮೀಸಲಾತಿಯಿಂದ ಬಿಟ್ಟುಹೋದ ವಿಜಯಪುರ ಜಿಲ್ಲೆ ಸೇರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಗಮನಕ್ಕೆ ತಂದು ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕು ಹಾಗೂ ವಿಜಯಪುರ ಜಿಲ್ಲೆಗೆ ಆಗುತ್ತಿರುವ ಅನ್ಯಾಯವನ್ನು ಪ್ರಧಾನಮಂತ್ರಿಯವರ ಗಮನಕ್ಕೆ ತಂದು ಕೇಂದ್ರ ಸರಕಾರದಿಂದ ಸಂವಿಧಾನದ 371(ಜೆ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೆ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿದರು.  


ಸುದ್ದಿ ಓದಿ