6 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಹೆಸ್ಕಾಂ ಕಚೇರಿ ಬಂದ್ ಮಾಡಿ ರೈತರ ಪ್ರತಿಭಟನೆ
Demand for 6-hour power supply: Farmers protest by shutting down HESCOM office.
ಲೋಕದರ್ಶನ ವರದಿ
6 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಹೆಸ್ಕಾಂ ಕಚೇರಿ ಬಂದ್ ಮಾಡಿ ರೈತರ ಪ್ರತಿಭಟನೆ
ಕಾಗವಾಡ 11: ತಾಲ್ಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಸಮರ್ಕ ವಿದ್ಯುತ್ ಪೂರೈಕೆಯಾಗದಿರುವುದನ್ನು ಖಂಡಿಸಿ ನೂರಾರು ರೈತರು ಶುಕ್ರವಾರ ಉಗಾರ ಖುರ್ದ ಪಟ್ಟಣದ ಹೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಹೆಸ್ಕಾಂ ಕಚೇರಿಗೆ ಆಗಮಿಸಿದ ರೈತರು, ಸಮರ್ಕ ವಿದ್ಯುತ್ ಪೂರೈಕೆ ಮಾಡದಿರುವ ಕುರಿತು ಜೆಇ ಅವರನ್ನು ತರಾಟೆಗೆ ತೆಗೆದುಕೊಂಡರು. ಉಗಾರ ಬುದ್ರುಕ ವ್ಯಾಪ್ತಿಯಲ್ಲಿ ಸುಮಾರು ಎರಡು ಸಾವಿರ ಎಕರೆ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ವಿದ್ಯುತ್ ಕೊರತೆಯಿಂದ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗಳು ಹಾಳಾದರೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಬಸವೇಶ್ವರ ಏತ ನೀರಾವರಿ, ಐನಾಪುರ ಏತ ನೀರಾವರಿ ಹಾಗೂ ಕರಿಮಸೂತಿ ಏತ ನೀರಾವರಿ ಯೋಜನೆಗಳಿಗೆ 24 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದರೂ, ಉಗಾರ ಬುದ್ರುಕ ಭಾಗದ ರೈತರಿಗೆ ಮಾತ್ರ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದು ಇಂಧನ ಸಚಿವರು ಹೇಳುತ್ತಿದ್ದರೂ, ಸ್ಥಳೀಯವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ರೈತರಿಗೆ ಪ್ರತಿದಿನ ಕನಿಷ್ಠ ಆರು ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಬೇಡಿಕೆ ಈಡೇರುವವರೆಗೆ ಹೆಸ್ಕಾಂ ಕಚೇರಿಯ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಎಚ್ಚರಿಸಿದರು. ಕಚೇರಿ ಆವರಣದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಶೀತಲಕುಮಾರ ಪಾಟೀಲ, ವಜ್ರಕುಮಾರ ಮಗದುಮ್ಮ, ರಾಹುಲ್ ಶಹಾ, ಮನೋಜ ಕುಸುನಾಳೆ, ಅಣ್ಣಾಸಾಬ ಪಾಂಗರೇ, ಜಯಪಾಲ ಸಾಂಗಾವಡೆ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 