ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ. ಸೈಯದ್ಗೆ ವಿಧಾನ ಪರಿಷತ್ ಸ್ಥಾನಕ್ಕೆ ಒತ್ತಾಯ
Demand for Legislative Council seat for KPCC Coordinator Dr. K.M. Syed
ಕೊಪ್ಪಳ, ಆ.30: ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ. ಸೈಯದ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಅವರನ್ನು ಒತ್ತಾಯಿಸಿದ್ದಾರೆ.
ಬಳ್ಳಾರಿಯಲ್ಲಿ ಹುಟ್ಟಿ ಬೆಳೆದಿರುವ ಡಾ. ಕೆ.ಎಂ. ಸೈಯದ್ ಅವರು ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷದ ಕಾರ್ಯಕ್ರಮಗಳು ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ವಿವಿಧ ಸಮುದಾಯಗಳ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸಲು ಶ್ರಮಿಸುತ್ತಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ಡಾ. ಕೆ.ಎಂ. ಸೈಯದ್ ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅವರ ಹೆಸರನ್ನು ಶಿಫಾರಸು ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಅವರು ಪಕ್ಷದ ಹಿರಿಯರ ಗಮನಕ್ಕೆ ಈ ಬೇಡಿಕೆಯನ್ನು ತಂದು, ಡಾ. ಕೆ.ಎಂ. ಸೈಯದ್ ಅವರಿಗೆ ಅರ್ಹ ಸ್ಥಾನಮಾನ ದೊರಕಿಸಲು ಮುಂದಾಗಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಸಂಘಟಕರಿಗೆ ಸೂಕ್ತ ರಾಜಕೀಯ ಅವಕಾಶ ಕಲ್ಪಿಸುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಮೂಡಲಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ದೊರೆಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 