ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ: ಸಚಿವ ಮಧು ಬಂಗಾರ​‍್ಪ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿ

ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ: ಸಚಿವ ಮಧು ಬಂಗಾರ​‍್ಪ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿ Demand for Urdu Teacher Recruitment: Various Organizations Submit Memorandum to Minister Madhu Banga


ಕೊಪ್ಪಳ:ಆ.18. ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ 15,000 ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲಾ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಲಾಗಿದ್ದು, ತಕ್ಷಣವೇ ಪೂರಕ ಆದೇಶ  ಹೊರಡಿಸಿ ಉರ್ದು ಶಿಕ್ಷಕರ ನೇಮಕಾತಿಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ’ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರ​‍್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.   ಮನವಿ ಪತ್ರ ಸಲ್ಲಿಸಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಸರ್ಕಾರ 15,000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವುದು ಪ್ರಗತಿಪರ ಹೆಜ್ಜೆಯಾಗಿದ್ದರೂ, ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸಂಪೂರ್ಣವಾಗಿ ಹೊರಗಿಟ್ಟಿರುವುದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಎಸಗಿದ ಶೈಕ್ಷಣಿಕ ಅನ್ಯಾಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.   ಮನವಿಯಲ್ಲಿ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆ: ಭಾರತೀಯ ಸಂವಿಧಾನದ ವಿಧಿ 21ಂ (ಶಿಕ್ಷಣದ ಹಕ್ಕು) ಹಾಗೂ ವಿಧಿ 350ಂ ಪ್ರಕಾರ ಅಲ್ಪಸಂಖ್ಯಾತ ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಉರ್ದು ಶಿಕ್ಷಕರ ನೇಮಕಾತಿ ತಡೆಯುವುದು ಈ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆಯಾಗುತ್ತದೆ.