ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯ
Demand for action against Panchayat Development Officer
ಲೋಕದರ್ಶನ ವರದಿ
ಬೆಳಗಾವಿ 03: ಖಾನಾಪುರ ಪಟ್ಟಣದ ಗಾಂಧಿನಗರ 3ನೇ ಅಡ್ಡರಸ್ತೆ (ಬಾವಿ ಹತ್ತಿರ), ವಾರ್ಡ್ ನಂ. 2ರ ನಿವಾಸಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
40 ವರ್ಷಗಳಿಂದ ವಾಸವಿದ್ದರೂ ಮೂಲ ಸೌಲಭ್ಯಗಳ ಕೊರತೆ ಆರೋಪ
ಮನವಿಯಲ್ಲಿ, ಈ ಪ್ರದೇಶದಲ್ಲಿ ಭಂಗಿಬೋಳ ಕುಟುಂಬವು ಸುಮಾರು 40 ವರ್ಷಗಳಿಂದ ವಾಸವಾಗಿದ್ದರೂ ಅವರಿಗೆ ಪಂಚಾಯತ್ ವತಿಯಿಂದ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಸಮರ್ಕವಾಗಿ ಲಭ್ಯವಾಗಿಲ್ಲ ಎಂದು ಆರೋಪಿಸಲಾಗಿದೆ.
ಕುಟುಂಬವು ಅತ್ಯಂತ ಬಡತನದಲ್ಲಿದ್ದು, ಈಗಾಗಲೇ ಸ್ಥಳೀಯ ನಿವಾಸಿಗಳು ಪಂಚಾಯತ್ ವ್ಯಾಪ್ತಿಯಲ್ಲಿ ಮನೆಗಳ ಹಕ್ಕು ಹಾಗೂ ಇತರ ಸೌಲಭ್ಯಗಳನ್ನು ಪಡೆದಿದ್ದಾರೆ. ಆದರೆ ಭಂಗಿಬೋಳ ಕುಟುಂಬಕ್ಕೆ ಯಾವುದೇ ರೀತಿಯ ವಸತಿ ಸೌಲಭ್ಯ ಅಥವಾ ಅಗತ್ಯ ನೆರವು ದೊರೆತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಮನವಿ
ಭಂಗಿಬೋಳ ಕುಟುಂಬದ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ, ಸಾರ್ವಜನಿಕರ ದೂರವಾಣಿ ಕರೆಗಳಿಗೆ ಸ್ಪಂದಿಸುತ್ತಿಲ್ಲ ಹಾಗೂ ಆಡಳಿತಾತ್ಮಕ ಕರ್ತವ್ಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಅಧಿಕಾರಿಯ ವಿರುದ್ಧ ತನಿಖೆಗೆ ಆಗ್ರಹ
ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಈಗಾಗಲೇ ಹಲವು ಪ್ರಕರಣಗಳಿವೆ ಎಂದು ಆರೋಪಿಸಿರುವ ಮನವಿದಾರರು, ಸಮಗ್ರ ತನಿಖೆ ನಡೆಸಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಅಧಿಕಾರಿಗಳು ಈ ಕುರಿತು ಸೂಕ್ತ ಪರೀಶೀಲನೆ ನಡೆಸಿ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 