ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ ೨೪ : ಎಐಸಿಸಿ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ದೇಶದಿಂದ ಗಡಿಪಾರು ಮಾಡಲು ಒತ್ತಾಯಿಸಿ ದಸಂಸ ಅಂಬೇಡ್ಕರ್ ವಾದ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ಗೌರವಾನ್ವಿತ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗೀಯ ಸಂಚಾಲಕರಾದ ಸಂಜು ವೈ ಕಂಬಾಗಿ ಮಾತನಾಡಿ, ಉತ್ತರಾಖಂಡದ ರಾಮಲೀಲಾ, ಮೈದಾನದಲ್ಲಿ ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸ್ಥಳವನ್ನು ಅಲ್ಲಿಯ ಆರ್.ಎಸ್.ಎಸ್. ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಚಗೊಳಿಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕ್ವಾದ ಜಿಲ್ಲಾ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ರವರು ೧೯೫೬ ಅಕ್ಟೋಬರ್ ೧೪ ರಂದು ಮನುವಾದದ ವಿರುದ್ಧವಾಗಿ ನಾನು ಹಿಂದು ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂ ಧರ್ಮದಲ್ಲಿ ಸಾಯುವುದಿಲ್ಲ ಎಂದು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮತ್ತು ಬಾಬಾಸಾಹೇಬ ಅಂಬೇಡ್ಕ್ರ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ನೀಡಿದ್ದಾರೆ. ಹಾಗೆಯೇ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ ಅವರಿಗೆ ಈ ರೀತಿ ಮನುವಾದಿಗಳು ನಡೆಸಿಕೊಳ್ಳುತ್ತಿದ್ದಾರೆ ಇನ್ನು ದೇಶದಲ್ಲಿ ಸಾಮಾನ್ಯರ ಪರಿಸ್ಥಿತಿ ಹೇಗಿದೆ ಎಂಬುವುದು ತಾವು ಅರಿತುಕೊಂಡು ಮಲ್ಲಿಕಾರ್ಜುನ ಖರ್ಗೆಯವರು ಸಾರ್ವಜನಿಕವಾಗಿ ಮಾತನಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶಿವು ಮೇಲಿಮನಿ, ಸವಿತಾ ವಗ್ಗರ, ಚೇತನ ತೊರವಿ, ಮಹಾಂತೇಶ ರಾಠೋಡ, ಸಂಗಮೇಶ ಇರಸೂರ, ಶಶಿಧರ ನಾಯ್ಕೋಡಿ, ಬಸೀರ ತಾಂಬೋಳಿ, ರಾಜು ಮೇತ್ರಿ, ಸುಭಾಸ ಹೊನ್ನಕಂಠಿ, ಸಿದ್ದು ಕಾಂಬಳೆ, ಸುನಂದಾ ದೊಡ್ಡಮನಿ, ಸಾಯಬಣ್ಣ ದಳಪತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.