ಬೆಳಗಾವಿ

ಬರಪೀಡಿತ ರೈತರಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯ

ಬರಪೀಡಿತ ರೈತರಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯ


ಸವದತ್ತಿ, 7: ತಾಲ್ಲೂಕಿನಲ್ಲಿ ತಲೆದೋರಿರುವ ತೀವ್ರ ಬರಪೀಡಿತ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಕೂಡಲೇ ಸಮರ​‍್ಕ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕೃಷಿಕ ಸಮಾಜದ ವತಿಯಿಂದ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.  

ಸಭೆಯಲ್ಲಿ ಮಳೆಯ ಕೊರತೆಯಿಂದ ಒಣಗಿಹೋಗಿರುವ ಬೆಳೆಗಳು ಹಾಗೂ ಅನ್ನದಾತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟದ ಕುರಿತು ಗಂಭೀರವಾಗಿ ಚರ್ಚಿಸಲಾಯಿತು. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.  

ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯಾಧ್ಯಕ್ಷ ಮಾಣಿಕ್ಯ ಚಿಲ್ಲೂರ ಮಾತನಾಡಿ, ರಾಜ್ಯ ಸರ್ಕಾರ ತಕ್ಷಣ ಸವದತ್ತಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರಿಗೆ ಉಂಟಾಗಿರುವ ಬೆಳೆ ನಷ್ಟಕ್ಕೆ ಸೂಕ್ತ ಕಾಲಮಿತಿಯಲ್ಲಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.  

ತಾಲ್ಲೂಕಿನಲ್ಲಿ ಮಳೆ ಕೊರತೆ ಹಾಗೂ ಬೆಳೆಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು. ತೀವ್ರ ಬರದಿಂದ ಬಳಲುತ್ತಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಪ್ರತಿ ಎಕರೆಗೆ ?50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಯಿತು.  

ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.14ರಂದು ತಾಲ್ಲೂಕು ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ರೈತ ಮುಖಂಡರ ನಿಯೋಗದಿಂದ ಅಧಿಕೃತ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.  

ಪೂರ್ವಭಾವಿ ಸಭೆಯಲ್ಲಿ ಶ್ರೀ ವೀರೇಶ್ವರ ಮಹಾಸ್ವಾಮಿಗಳು, ರೈತ ಮುಖಂಡರಾದ ಬಸವರಾಜ ಬೆಳ್ಳಿಕಟ್ಟಿ, ಚಂದ್ರ​‍್ಪ, ಈರಣ್ಣ ಹೆಬ್ಬಳ್ಳಿ, ಸಂಗನಗೌಡ ಚವನಗೌಡ, ಶ್ರೀಕಾಂತ ಹಟ್ಟಿಹೊಳಿ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರಮುಖ ರೈತ ಮುಖಂಡರು ಉಪಸ್ಥಿತರಿದ್ದು, ರೈತ ಪರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. 


ಸುದ್ದಿ ಓದಿ