ಬೆಳಗಾವಿ

ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರದ ತನಿಖೆಗೆ ಆಗ್ರಹ

ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರದ ತನಿಖೆಗೆ ಆಗ್ರಹ


ಕಂಕಣವಾಡಿ 16 : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಸ್ಟಿಂಗ್ ಆಪರೇಷನ್ ಆರೋಪಗಳ ಹಿನ್ನೆಲೆ ಮತ್ತು ಉದ್ದೇಶದ ಕುರಿತು ಸಮಗ್ರ ತನಿಖೆ ನಡೆಸಿ, ಷಡ್ಯಂತ್ರ ರೂಪಿಸಿರುವುದು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ನ್ಯಾಯದ ಹೋರಾಟಗಾರ ಸತೀಶಕುಮಾರ ಅಡವಿ ಆಗ್ರಹಿಸಿದ್ದಾರೆ.  

ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯ, ಸಮಾನ ಅವಕಾಶ, ಬಡವರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳ ಪರವಾಗಿ ದೀರ್ಘಕಾಲದಿಂದ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿವಿಧ ಜನಕಲ್ಯಾಣ ಯೋಜನೆಗಳು ಅವರ ಆಡಳಿತದ ಪ್ರಮುಖ ಭಾಗವಾಗಿವೆ.  

ಇಂತಹ ನಾಯಕನ ವಿರುದ್ಧ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಇದರ ಹಿಂದಿನ ಉದ್ದೇಶವೇನು ಎಂಬ ಪ್ರಶ್ನೆ ಉದ್ಭವಿಸಿದೆ. ಆರೋಪಗಳ ಮೂಲಕ ನಾಯಕನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆದಿದೆಯೇ ಎಂಬುದನ್ನು ತನಿಖೆಯ ಮೂಲಕ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸ್ಟಿಂಗ್ ಆಪರೇಷನ್ನಲ್ಲಿ ಹೊರಬಂದಿರುವ ಯಾವುದೇ ವಿಡಿಯೊ ಅಥವಾ ಸಂಭಾಷಣೆಯನ್ನು ಸಂಪೂರ್ಣ ಹಿನ್ನೆಲೆ, ವಿಶ್ವಾಸಾರ್ಹತೆ ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಪರೀಶೀಲಿಸಬೇಕು. ಆರೋಪ ಸಾಬೀತಾಗುವ ಮೊದಲು ಯಾರನ್ನೂ ಅಪರಾಧಿ ಎಂದು ಪರಿಗಣಿಸಬಾರದು. ಅದೇ ರೀತಿ, ಉದ್ದೇಶಪೂರ್ವಕವಾಗಿ ಸುಳ್ಳು ಆರೋಪ ಅಥವಾ ಷಡ್ಯಂತ್ರ ನಡೆಸಿರುವುದು ಸಾಬೀತಾದರೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.  


ಸುದ್ದಿ ಓದಿ