ರಬಕವಿ-ಬನಹಟ್ಟಿ ಪ್ರಜಾಸೌಧ ನಿರ್ಮಾಣಕ್ಕೆ ಒತ್ತಾಯ
Demand for construction of Prajasoudha in Rabakavi-Banahatti
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 01: ನಗರಸಭೆ ವ್ಯಾಪ್ತಿಯಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ವಿವಿಧ ಪಕ್ಷಗಳ ಮುಖಂಡರು ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ರಬಕವಿ ವಿರಕ್ತಮಠದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖಂಡರು, ಪ್ರಜಾಸೌಧವನ್ನು ಬೇರೆಡೆ ನಿರ್ಮಿಸುವ ಬಗ್ಗೆ ಹರಡುತ್ತಿರುವ ಮಾಹಿತಿ ಸರಿಯಲ್ಲ. ನಗರಸಭೆ ವ್ಯಾಪ್ತಿಯಲ್ಲಿಯೇ ಕಟ್ಟಡ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಪ್ರಜಾಸೌಧ ನಿರ್ಮಾಣಕ್ಕಾಗಿ ನಿರಂತರ ಪ್ರಯತ್ನ ನಡೆಯುತ್ತಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ನಗರಾಭಿವೃದ್ಧಿಗೆ ರಾಜಕೀಯ ಭೇದ ಮರೆತು ಎಲ್ಲರೂ ಸಹಕರಿಸಬೇಕು ಎಂದರು. ಬಿಜೆಪಿ ಮುಖಂಡ ಬಸವರಾಜ ತೇಗಿ ಮಾತನಾಡಿ, ರಬಕವಿ ನಗರದಲ್ಲಿಯೇ ಮಿನಿ ವಿಧಾನಸೌಧ ನಿರ್ಮಾಣವಾಗಲು ಎಲ್ಲ ಪಕ್ಷಗಳ ಮುಖಂಡರು ಕೈಜೋಡಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿದ್ದರು. ಶಿವಾನಂದ ಬಾಗಲಕೋಟ ಮಠ ಅಧ್ಯಕ್ಷತೆ ವಹಿಸಿದ್ದರು. ಯಶವಂತ ವಾಜಂತ್ರಿ ಸ್ವಾಗತಿಸಿದರು ಹಾಗೂ ಸಂಗಮೇಶ ಮಡಿವಾಳರ ಕಾರ್ಯಕ್ರಮ ನಿರ್ವಹಿಸಿದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 