ಅಂಗನವಾಡಿ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Demand for fulfillment of various demands, including a salary hike for Anganwadi workers
ಹೂವಿನಹಡಗಲಿ, ಆ.25: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರ ವೇತನ ಹೆಚ್ಚಳ, 6ನೇ ಗ್ಯಾರಂಟಿ ಜಾರಿ ಹಾಗೂ ಹೆಚ್ಚುವರಿ ಕೆಲಸದಿಂದ ಮುಕ್ತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಎಐಟಿಯುಸಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಬಿ. ಜಯಲಕ್ಷ್ಮಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಸರ್ಕಾರದ ಪೌಷ್ಟಿಕ ಆಹಾರ ಯೋಜನೆಯಡಿ ನೀಡಲಾಗುತ್ತಿರುವ ಆಹಾರದ ಘಟಕ ವೆಚ್ಚವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಎಐಟಿಯುಸಿ ಮುಖಂಡ ಸುರೇಶ್ ಮಾತನಾಡಿ, ಅಂಗನವಾಡಿ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ಕನಿಷ್ಠ ವೇತನ ಹಾಗೂ ಮಾಸಿಕ ಪಿಂಚಣಿ ನೀಡಬೇಕು. ನಿವೃತ್ತರಾದ ಎಲ್ಲ ನೌಕರರಿಗೆ ತಕ್ಷಣ ಗ್ರಾಚ್ಯುಟಿ ಪಾವತಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಅರಾ್ಣ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸರ್ಕಾರವು ಅಂಗನವಾಡಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 