ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ, ಆ. 5: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಹಾಗೂ ವಿದ್ಯುತ್, ನಗರಾಭಿವೃದ್ಧಿ ಮತ್ತು ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ವಿಳಂಬವಿಲ್ಲದೆ ಬಗೆಹರಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ. ಕೆಂಗಾಣಾಳ ಸರ್ಕಾರವನ್ನು ಆಗ್ರಹಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕರು ವಿವಿಧ ಸರ್ಕಾರಿ ಸೇವೆಗಳಿಗೆ ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ವಿದ್ಯುತ್ ಸಂಪರ್ಕ, ಇ-ಸ್ವತ್ತು ದಾಖಲೆ, ಕಟ್ಟಡ ಅನುಮತಿ ಸೇರಿದಂತೆ ಸಾರ್ವಜನಿಕ ಸೇವೆಗಳನ್ನು ಪಾರದರ್ಶಕವಾಗಿ ಮತ್ತು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ರೈತರ ಪಂಪ್‌ಸೆಟ್‌ಗಳ ಮೇಲಿನ ದಂಡ ಹಾಗೂ ಹೆಚ್ಚುವರಿ ಶುಲ್ಕಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಆಗಸ್ಟ್ 16ರಿಂದ 31ರವರೆಗೆ ಸಾರ್ವಜನಿಕರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.