ವಸತಿ ನಿಲಯ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ
Demand for implementation of minimum wages for hostel workers
ಲೋಕದರ್ಶನ ವರದಿ
ಸಿಂದಗಿ 16: ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ವತಿಯಿಂದ, ರಾಜ್ಯದ ವಿವಿಧ ಸರ್ಕಾರಿ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಚಳವಳಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಕಾಶೀಬಾಯಿ ಜನಗೊಂಡ, ಉಪಾಧ್ಯಕ್ಷೆ ರಜಿನಿ ಪಾಟೀಲ, ಯಲ್ಲಮ್ಮ, ಪಾರ್ವತಿ ಕಟ್ಟಿಮನಿ, ಕಲ್ಯಾಣಸ್ವಾಮಿ, ಜ್ಯೋತಿ, ಜಯಶ್ರೀ, ಸಾತವ್ವ, ಶಿವಮ್ಮ, ಲಕ್ಷ್ಮೀ, ಕಾವೇರಿ ಸೇರಿದಂತೆ ಹಲವರು ಮಾತನಾಡಿದರು.
ರಾಜ್ಯದ ವಿವಿಧ ಸರ್ಕಾರಿ ವಸತಿ ನಿಲಯಗಳಲ್ಲಿ ಅಡುಗೆ, ಸ್ವಚ್ಛತೆ, ಕಾವಲು ಸೇರಿದಂತೆ ವಿವಿಧ ಕೆಲಸಗಳನ್ನು ನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರು ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿದ್ದಾರೆ. ದುಬಾರಿ ಜೀವನ ನಿರ್ವಹಣೆ ಕಷ್ಟವಾಗಿರುವ ಸಂದರ್ಭದಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಸಮರ್ಕವಾಗಿ ಪಾವತಿಸದಿರುವುದರಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು.
ವಸತಿ ನಿಲಯ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಿ, ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಸಬೇಕು. ವೇತನ ಚೀಟಿ ನೀಡುವುದರ ಜೊತೆಗೆ ಪಿಎಫ್ ಮತ್ತು ಇಎಸ್ಐ ಸೇರಿದಂತೆ ಶಾಸನಬದ್ಧ ಸೌಲಭ್ಯಗಳನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಿ ಸಂಬಂಧಿಸಿದ ಇಲಾಖೆ ಹಾಗೂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 