ಲಿಂಗಾಯತ ಪಂಚಮಸಾಲಿ, ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಆಗ್ರಹ
ಶಿಗ್ಗಾವಿ 13: ಲಿಂಗಾಯತ ಪಂಚಮಸಾಲಿ ಹಾಗೂ ಉಪಪಂಗಡಗಳನ್ನು ಆದಷ್ಟು ಬೇಗನೆ ಕೇಂದ್ರದ ಮೀಸಲಾತಿ ಓಬಿಸಿ ಪಟ್ಟಿಗೆ ಸೇರಿಸುವಂತೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಂಚಮಸಾಲಿ ಸಮಾಜದ ಮುಖಂಡ ಹಾಗೂ ಮೀಸಲಾತಿ ಹೋರಾಟಗಾರ ಮಂಜುನಾಥ್ ಮಣ್ಣಣ್ಣವರ ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಅಮಿತ್ ಶಾ ರವರಿಗೆ ಆಗ್ರಹಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಓಬಿಸಿ ಪಟ್ಟಿ ಮತ್ತು ರಾಜ್ಯದಲ್ಲಿ ಪ್ರವರ್ಗ 2 ಎ ಪಟ್ಟಿಯಲ್ಲಿ ಲಿಂಗಾಯತ ಪಂಚಮಸಾಲಿ ಹಾಗೂ ಲಿಂಗಾಯತ ಉಪ ಪಂಗಡಗಳನ್ನು ಸೇರಿಸುವಂತೆ ಹಲವು ವರ್ಷಗಳಿಂದ ಹೋರಾಟ ರಾಜ್ಯಾದ್ಯಂತ ನಡೆಯುತ್ತಿದೆ ಅದಕ್ಕೆ ಈವರೆಗೂ ಕೇಂದ್ರ ಸರ್ಕಾರ ಓಬಿಸಿ ಪಟ್ಟಿಗೆ ಸೇರಿಸಿ ಇರುವುದಿಲ್ಲ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದ ಸಾನಿಧ್ಯ ಮತ್ತು ನೇತೃತ್ವ ವಹಿಸಿಕೊಂಡಿರುವ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಬಸವ ಜಯಂತಿಯ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತೊಮ್ಮೆ ರಾಜ್ಯದ ಸಂಕೇಶ್ವರದಿಂದ ಹೋರಾಟ ಪ್ರಾರಂಭಿಸಿದ್ದು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿರುವ ಈ ಹೋರಾಟಕ್ಕೆ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಜೊತೆಗೆ ರಾಜ್ಯ ಸರ್ಕಾರವು ಸಹ ಪ್ರವರ್ಗ 2ಎ ಮೀಸಲಾತಿ ಪಟ್ಟಿಯಲ್ಲಿ ಸಮುದಾಯವನ್ನು ಸೇರಿಸಲು ತಕ್ಷಣವೇ ಕ್ರಮ ಮಾಡಬೇಕು ಜೊತೆಗೆ ಲಿಂಗಾಯತ ಪಂಚಮಸಾಲಿ ಹಾಗೂ ಉಪ ಪಂಗಡಗಳಿಗೆ ಸರ್ಕಾರದಲ್ಲಿ ಹೆಚ್ಚಿನ ಸೂಕ್ತ ಸ್ಥಾನಮಾನ ಕೊಡುವ ವಿಚಾರವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗಮನ ಹರಿಸಬೇಕೆಂದು ಪಂಚಮಸಾಲಿ ಸಮಾಜದ ಪ್ರಭಾವಿ ಮುಖಂಡ ಮಂಜುನಾಥ್ ಮಣ್ಣಣ್ಣವರ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಹಿಸಿದ್ದಾರೆ.