ಪ್ರಾಧ್ಯಾಪಕರ ನಿವೃತ್ತಿ ವೇತನ ಹೆಚ್ಚಳ ಒತ್ತಾಯ
Demand for increase in professors' pensions
ಧಾರವಾಡ 22: ಇಂದು ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಧಾರವಾಡ ಇವರಿಗೆ ಬೇಟಿ ಆಗಿ 1-7-2022 ರ ನಂತರ ನಿವೃತ್ತಿ ಹೊಂದಿದ ಪ್ರಾಧ್ಯಾಪಕರ ನಿವೃತ್ತಿ ವೇತನ ಎತ್ತರಿಸುವ ಕುರಿತು ಚರ್ಚೆ ಮಾಡಲಾಯಿತು. 367 ಪ್ರಾಧ್ಯಾಪಕರರು ಧಾರವಾಡ ವಿಭಾಗದಿಂದ ನಿವೃತ್ತಿ ವೇತನ ಎತ್ತರಿಸುವ ಕುರಿತು ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಆದರೆ ಕೇವಲ 112 ಪ್ರಾಧ್ಯಾಪಕರು ಮಾತ್ರ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದು ಜಂಟಿ ನಿರ್ದೇಶಕರು ತಿಳಿಸಿದರು. ಈಗಾಗಲೇ ಸಲ್ಲಿಸಿದ ಪ್ರಸ್ತಾವನೆಯನ್ನು ಬೇಗನೆ ಕೇಂದ್ರ ಕಛೇರಿಗೆ ಕಳುಹಿಸಿ ಕೊಡುವುದಾಗಿ ತಿಳಿಸಿದರು. ಬಾಕಿ ಉಳಿದಿರುವ ಪ್ರಸ್ತಾವನೆಗಳನ್ನು ಬೇಗನೆ ತರಿಸಿಕೊಳ್ಳಲು ಒತ್ತಾಯಿಸಲಾಯಿತು. ಡಾ. ಲಿಂಗರಾಜ ಅಂಗಡಿ ಹಾಗೂ ಡಾ. ನಾರಾಯಣ ಉಪಾಧ್ಯೆ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 