ಸಿಂಧಗಿ

ಜೋಡೆತ್ತು ಕೃಷಿಕರಿಗೆ ಮಾಸಿಕ ಪ್ರೋತ್ಸಾಹಧನಕ್ಕೆ ಆಗ್ರಹ

ಜೋಡೆತ್ತು ಕೃಷಿಕರಿಗೆ ಮಾಸಿಕ ಪ್ರೋತ್ಸಾಹಧನಕ್ಕೆ ಆಗ್ರಹ

ಲೋಕದರ್ಶನ ವರದಿ 

ಸಿಂದಗಿ 06 :  ಜೋಡೆತ್ತಿನ ಕೃಷಿಕರಿಗೆ ಮಾಸಿಕ 11 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡುವ ನಿಟ್ಟಿನಲ್ಲಿ ಸಿದ್ದೇಶ್ವರ ಸ್ವಾಮೀಜಿಗಳ ಹೆಸರಿನಲ್ಲಿ ನಂದಿ ಯೋಜನೆ ಜಾರಿಗೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಸುಂಗಠಾಣ ಗ್ರಾಮಸ್ಥರು ಜೋಡು ಎತ್ತಿನ ಗಾಡಿಯ ಮೂಲಕ ಆಗಮಿಸಿ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರ ಮೂಲಕ ಸರ್ಕಾರಕ್ಕೆ ರೈತರು ಮನವಿ ಸಲ್ಲಿಸಿದರು. 

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ತಲುಪಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂದಿ ಯೋಜನೆಯನ್ನು ಜಾರಿಗೆ ತರಬೇಕು. ಈ ಮೂಲಕ ನೇಗಿಲ ಯೋಗಿಗಳನ್ನು ಕಾಪಾಡಬೇಕು. ಜೋಡೆತ್ತಿನ ಕೃಷಿಕರನ್ನು ಉತ್ತೇಜಿಸಲು ರಾಜ್ಯದ ಬಜೆಟ್ ನ ಶೇಕಡ 10ರಷ್ಟು ಮೀಸಲಿಡುವ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಲಾಯಿತು. 


ಸುದ್ದಿ ಓದಿ