ವಿದ್ಯಾರ್ಥಿ ವೇತನ ಬಿಡುಗಡೆ ಆಗ್ರಹ
ಜಮಖಂಡಿ 04: 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ಗಗಅಒಖ ತಂತ್ರಾಂಶವನ್ನು ಸರಿಪಡಿಸಿ, ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ, ಎಜಿ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿಮರ್ಿಸಿ, ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ ಸದಾಶಿವ ಮಕ್ಕೋಜಿ ಅವರಿಗೆ ಮನವಿ ಸಲ್ಲಿಸಿದರು.
ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾಥರ್ಿ ವೇತನಕ್ಕೆ ಅಜರ್ಿಯನ್ನು ಸಲ್ಲಿಸಿ, ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅಜರ್ಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಯಾಗಿರುವುದಾಗಿ ನಮೂದಿಸಲಾಗಿದೆ. ಅದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾಥರ್ಿ ವೇತನ ದೊರತಿರುವುದಿಲ್ಲ. ಈ ಕೂಡಲೇ ಸರ್ಕಾರ ಈ ವಿಷಯದ ಬಗ್ಗೆ ಗಂಭೀರವಾಗಿ ಗಮನ ಹರಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾ ದ ವಿದ್ಯಾಥರ್ಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ ಹಾಗೂ ಈ ವಿದ್ಯಾರ್ಥಿವೇತನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸಯವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.
ಎನ್ಈಪಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾನಿಲಯಗಳು ತಂತ್ರಾಂಶವನ್ನು ಬಳಸಿ, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲ ರೀತಿಯ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ, ಆದರೆ ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದಾಗಿ ಹಾಸ್ಟೆಲ್ಗೆ ಅಜರ್ಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿ ವೇತನಗಳಿಗೆ ಅಜರ್ಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದೆ ಇರುವುದರಿಂದ ಹಲವಾರು ರೀತಿ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದೆ. ಈ ಕೂಡಲೇ ಅವುಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಸಾವಿರಾರೂ ವಿದ್ಯಾಥರ್ಿ- ವಿದ್ಯಾರ್ಥಿ ನಿಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.