ಕೊಲ್ಹಾರದಲ್ಲಿ ಐಸಿಟಿಸಿ ಕೇಂದ್ರ ಪುನರ್ಸ್ಥಾಪನೆಗೆ ಆಗ್ರಹ
ಕೊಲ್ಹಾರ 17 : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರ (ಐಸಿಟಿಸಿ) ಅನ್ನು ತಕ್ಷಣ ಪುನರ್ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರವಿ ಗೊಲಸಂಗಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್ ಸಂತೋಷ್ ಮ್ಯಾಗೇರಿ ಅವರ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೋಲಾರ ಹೊಸ ತಾಲೂಕು ಕೇಂದ್ರವಾಗಿದ್ದು, ರೋಣಿಹಾಳ, ತೆಲಗಿ, ಕೂಡಗಿ, ಮುಳವಾಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆರೋಗ್ಯ ಸೇವೆಗಳಿಗಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಸಿಟಿಸಿ ಕೇಂದ್ರದ ಮೂಲಕ ಎಚ್ಐವಿ ಪರೀಕ್ಷೆ, ಆಪ್ತ ಸಮಾಲೋಚನೆ ಹಾಗೂ ಜಾಗೃತಿ ಸೇವೆಗಳು ಪರಿಣಾಮಕಾರಿಯಾಗಿ ದೊರೆಯುತ್ತಿದ್ದವು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯಾವುದೇ ಸಮರ್ಕ ಕಾರಣವಿಲ್ಲದೆ ಐಸಿಟಿಸಿ ಕೇಂದ್ರವನ್ನು ಸ್ಥಗಿತಗೊಳಿಸಿರುವುದರಿಂದ ಸುಮಾರು 28 ರಿಂದ 30 ಸಾವಿರ ಜನಸಂಖ್ಯೆಯಿರುವ ಕೋಲಾರ ತಾಲೂಕಿನ ಜನರು ಅಗತ್ಯ ಆರೋಗ್ಯ ಸೇವೆಗಳಿಂದ ವಂಚಿತರಾಗಿದ್ದಾರೆ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ.