ಬೆಳಗಾವಿ

ರಸ್ತೆ ದುರಸ್ತಿಗೆ ಆಗ್ರಹ: ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಗ್ರಾಮಸ್ಥರು

ರಸ್ತೆ ದುರಸ್ತಿಗೆ ಆಗ್ರಹ: ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಗ್ರಾಮಸ್ಥರು

ಸಂಬರಗಿ 06 : ಪಾಂಡೇಗಾಂವ್ ಗ್ರಾಮದ ಸಂಪರ್ಕ ರಸ್ತೆಗಳನ್ನು ಡಾಂಬರೀಕರಣ ಹಾಗೂ ದುರಸ್ತಿ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಲವು ದಿನಗಳಿಂದ ಸಲ್ಲಿಸುತ್ತಿದ್ದ ಮನವಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು.   ಕರ್ನಾಟಕದ ಗಡಿ ಭಾಗದಲ್ಲಿರುವ ಪಾಂಡೇಗಾಂವ್ ಗ್ರಾಮದಿಂದ ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಗುಂಡಿಗಳಿಂದ ಕೂಡಿವೆ. ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದ್ದು, ಪಾಂಡೇಗಾಂವ್ನಿಂದ ಕಂಗ್ನೋಳಿ ಕಡೆಗೆ ಹೋಗುವ ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು.

ಮಾಜಿ ಸೈನಿಕ ಸಚಿನ್ ಪಾಟೀಲ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಮೋಘ ಮಹಾಕಾಳಿ ಅವರ ಎಚ್ಚರಿಕೆ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಪರೀಶೀಲನೆ ನಡೆಸಿದರು.  ಜಿಲ್ಲಾ ಪಂಚಾಯಿತಿ ಎಂಜಿನಿಯರ್ ವೀರನಾಥ ವಾಲಿ ಹಾಗೂ ತಂಡ ರಸ್ತೆ ಪರೀಶೀಲಿಸಿ, ಶೀಘ್ರವೇ ದುರಸ್ತಿ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದರು.   ಈ ಸಂದರ್ಭದಲ್ಲಿ ಸಚಿನ್ ಪಾಟೀಲ, ಸಾಕ್ಷರ ಪಾಟೀಲ, ಶ್ರೀಮಂತ ಪಾಟೀಲ, ಶುಭಂ ಜಾಧವ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ