ಸರಕಾರಿ ಪದವಿ ಮಹಾವಿದ್ಯಾಲಯಕ್ಕೆ ಮಂಜೂರಗಾಗಿ ಕರವೇ ಆಗ್ರಹ
Demand for sanction for government degree college is a tax
ಕಾಗವಾಡ 07 : ಕಾಗವಾಡ ತಾಲೂಕು ಕೇಂದ್ರವಾಗಿ ದಶಕಗಳೇ ಉರುಳಿದೆ. ಆದರೆ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೇರೆ ಊರಿನತ್ತ ಮುಖ ಮಾಡುತ್ತಿರುವುದು ಬೇಸರ ಸಂಗತಿಯಾಗಿದೆ ಎಂದು ನಾರಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಳವಳ ವ್ಯಕ್ತಪಡಿಸಿದೆ.ಶನಿವಾರದಂದು ಚಿಕ್ಕೋಡಿ ಸಂಸದರಾದ. ಕುಮಾರಿ, ಪ್ರಿಯಾಂಕ ಜಾರಕಿಹೊಳಿ ಅವರು ಕಾಗವಾಡ ಪಟ್ಟಣಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಬಂದಾಗ ಸರಕಾರಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳನ್ನು ಸ್ಥಾಪಿಸಿ ಎಂದು ಮನವಿ ನೀಡಿದ್ದರು.
ಮುಂಬರುವ ಶೈಕ್ಷಣಿಕ ವರ್ಷದಿಂದ ಸರಕಾರಿ ಪದವಿ ಮಹಾವಿದ್ಯಾಲಯ ಸ್ಥಾಪನೆಯಾದರೆ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಆದ್ದರಿಂದ ತಾವು ತಕ್ಷಣ ಗಮನಕ್ಕೆ ತೆಗೆದುಕೊಂಡು ಹೊಸ ಸರಕಾರಿ ಮಹಾವಿದ್ಯಾಲಯವನ್ನು ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಸಮಯದಲ್ಲಿ ರೈತ ಅಧ್ಯಕ್ಷರಾದ ಗಣೇಶ ಕೊಳೆಕರ, ಉಪಾಧ್ಯಕ್ಷ ಫಾರೂಕ ಅಲಾಸ್ಕರ, ಸಚಿನ ಗಾವಡೆ ಬಾಬಾಸಾಬ ಕೊತ್ತಲಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 