ಸಿಂದಗಿಯ ವೀರಸೌಧ ಅಭಿವೃದ್ಧಿಗೆ ಆಗ್ರಹ
Demand for the development of Veerasoudha in Sindagi
ಲೋಕದರ್ಶನ ವರದಿ
ವಿಜಯಪುರ 25: ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಹಾಗೂ ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3ರಂದು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸಬೇಕು ಎಂದು ವಿಜಯಪುರ ಜಿಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಮುಖಂಡರು, ಸಿಂದಗಿಯಲ್ಲಿ ಸ್ವಾಮಿ ರಾಮಾನಂದ ತೀರ್ಥರು ಜನಿಸಿ ಹೈದರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ನೀಡಿದ್ದರಿಂದ ಅವರ ಜನ್ಮಸ್ಥಳದಲ್ಲಿರುವ ಸ್ಮಾರಕ ವೀರಸೌಧವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.
ಸ್ವಾಮಿ ರಾಮಾನಂದ ತೀರ್ಥರ ಆದರ್ಶ ಹಾಗೂ ಜೀವನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಅವರ ಜನ್ಮದಿನವನ್ನು ಸರ್ಕಾರದ ವತಿಯಿಂದ ಜಯಂತಿಯಾಗಿ ಆಚರಿಸಿ ಗೌರವ ಸಲ್ಲಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ವಿನೋದ ಖೇಡ, ಸಿದ್ದನಗೌಡ ಪಾಟೀಲ, ಎನ್. ಸುರೇಶಕುಮಾರ, ಅನಿಲ್ ಇಕ್ಕಡ, ಜಗದೇವ ಸೂರ್ಯವಂಶಿ, ಮಲ್ಲನಗೌಡ ಪಾಟೀಲ, ಪ್ರದೀಪ ದೇಶಪಾಂಡೆ, ಕಲ್ಲಪ್ಪ ಶಿವಶರಣ, ಅಯೂಬ್ಖಾನ್ ನದಾಫ್, ಮೊಹಮ್ಮದ್ ಭಾಗವಾನ್, ಎಂ.ಎಂ. ಹಂಗರಗಿ, ಸಂಗನಗೌಡ ಪಾಟೀಲ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 