ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ

ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ   Demand for the establishment of a Government Medical College in Vijayapura

ವಿಜಯಪುರ, ಸೆ. 1: ವಿಜಯಪುರ ಜಿಲ್ಲೆಯಲ್ಲಿ ಬಹುದಿನಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಶೀಘ್ರ ಸ್ಥಾಪಿಸುವಂತೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ನಿಯೋಗವು ಜಿಲ್ಲಾ ಉಸ್ತುವಾರಿ ಹಾಗೂ ಸಚಿವರಾದ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.  

ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಹಲವು ವರ್ಷಗಳಿಂದ ಜಿಲ್ಲೆಯ ಜನರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ವ್ಯಕ್ತಪಡಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬವಿಲ್ಲದೆ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿತು.  

ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಬೇಕು. ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಅನುದಾನವನ್ನು ಮುಂಬರುವ ರಾಜ್ಯ ಬಜೆಟ್ನಲ್ಲಿ ಘೋಷಿಸಬೇಕು. ಸಚಿವ ಸಂಪುಟದ ಅನುಮೋದನೆ ದೊರೆತ ತಕ್ಷಣವೇ ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕಾಲೇಜು ಸ್ಥಾಪನೆಗೆ ಶೀಘ್ರ ಚಾಲನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.