ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆಗ್ರಹ
Demand for the establishment of a Rajput Community Development Board
ತಾಳಿಕೋಟಿ: ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮುದಾಯವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ. ನಮ್ಮ ಯುವಪೀಳಿಗೆಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಸಿಗದೆ ಸಮಾಜವು ಇಂದಿಗೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು “ರಜಪೂತ ಅಭಿವೃದ್ಧಿ ಮಂಡಳಿ”ಯನ್ನು ಕೂಡಲೇ ಸ್ಥಾಪಿಸಬೇಕೆಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಕರ್ನಾಟಕ ರಜಪೂತ ಯುವಶಕ್ತಿ ಸಂಘಟನೆ ಮುಖ್ಯಸ್ಥ ಮಹದೇವ ಪ್ರಸಾದ್ ತಿವಾರಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು ಕಲಬುರಗಿ ಜಿಲ್ಲಾಡಳಿತದ ಮುಖಾಂತರ ಆರಂಭವಾದ ರಜಪೂತ ಸಮಾಜದ ಕೌಟುಂಬಿಕ ಸಮೀಕ್ಷೆ ಹಾಗೂ ಡಿಜಿಟಲ್ ನೋಂದಣಿ ಅಭಿಯಾನವು ಯಶಸ್ವಿಯಾಗಿ ನಡೆದು, ಅದರ ಸಮಗ್ರ ದತ್ತಾಂಶಗಳ ವರದಿ ಈಗ ಬೆಂಗಳೂರಿನಲ್ಲಿರುವ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರೀಶೀಲನೆಯಲ್ಲಿದೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ನಮ್ಮ ಒಗ್ಗಟ್ಟಿನ ಹೋರಾಟ ಮುಂದುವರಿದಿದೆ.
ಇದೇ ಉದ್ದೇಶಕ್ಕಾಗಿ ರಾಜ್ಯದ ಸಮಸ್ತ ರಜಪೂತ ಸಮಾಜ ಬಾಂಧವರು ವೈಯಕ್ತಿಕ ಭಿನ್ನಾಪ್ರಾಯಗಳನ್ನು ಮರೆತು, ಪಕ್ಷಾತೀತವಾಗಿ ಒಂದಾಗಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಹಮ್ಮಿಕೊಳ್ಳಲು ಗದಗ-ಬೆಟಗೇರಿ ರಜಪೂತ ಸಮಾಜದ ವತಿಯಿಂದ ಇದೆ ದಿನಾಂಕ ತಾರೀಖು:16-08-2026 ರಂದು ಗದಗಿನಲ್ಲಿ ರಾಜ್ಯಮಟ್ಟದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಈ ಮಹತ್ವದ ಸಭೆಯಲ್ಲಿ ಸಮಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿಕೊಳ್ಳುತ್ತೇವೆ.
ನಮ್ಮ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ “ರಜಪೂತ ಅಭಿವೃದ್ಧಿ ಮಂಡಳಿ”ಯನ್ನು ತಕ್ಷಣವೇ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಗೆ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ತುರ್ತು ಶಿಫಾರಸು ಪತ್ರವನ್ನು ಕಳುಹಿಸಿಕೊಡಬೇಕೆಂದು ಈ ಮೂಲಕ ಮತ್ತೊಮ್ಮೆ ಒತ್ತಾಯಿಸುತ್ತೇವೆ. ಬನ್ನಿ, ನಮ್ಮ ಅಸ್ತಿತ್ವ ಮತ್ತು ಹಕ್ಕುಗಳಿಗಾಗಿ ಎಲ್ಲರೂ ಕೈಜೋಡಿಸಿ ಈ ಐತಿಹಾಸಿಕ ಹೋರಾಟವನ್ನು ಯಶಸ್ವಿಗೊಳಿಸಲು ಸಹಕರಿಸಿ ಎಂದು ಸಮಾಜ ಬಾಂಧವರಲ್ಲಿ ವಿನಂತಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 