ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Demand for the fulfillment of various demands, including the implementation of minimum wages
ಕೊಪ್ಪಳ, ಸೆ. 1: ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸಬೇಕು, ಸಚಿವ ಸಂಪುಟದ ಉಪಸಮಿತಿ ರಚನೆಯನ್ನು ರದ್ದುಗೊಳಿಸಬೇಕು ಹಾಗೂ ಸಮರ್ಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ವತಿಯಿಂದ ಸೆ. 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಿಂದ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಕಾರ್ಯದರ್ಶಿ ನಿರುಪಾದಿ ಬೆಣಕಲ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಹೋರಾಟದಲ್ಲಿ ಜಿಲ್ಲೆಯ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದರ ಜೊತೆಗೆ ಕೈಬಿಡಲಾಗಿರುವ ಬೀಡಿ, ಪ್ಲಾಂಟೇಶನ್, ಕೈಮಗ್ಗ, ಗಾರ್ಮೆಂಟ್ಸ್, ಎಪಿಎಂಸಿ ಲೋಡಿಂಗ್-ಅನ್ಲೋಡಿಂಗ್ ಸೇರಿದಂತೆ 19 ಕೈಗಾರಿಕೆಗಳ ಕಾರ್ಮಿಕರ ವೇತನವನ್ನು ಕೂಡಲೇ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.
ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ, ಪಿಂಚಣಿ ಹಾಗೂ ಆರೋಗ್ಯ ರಕ್ಷಣೆಯನ್ನು ಖಾತರಿಪಡಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ನಿರಂತರ ಸ್ವರೂಪದ ಕೆಲಸಗಳಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರನ್ನು ಕನಿಷ್ಠ ವೇತನದ ವ್ಯಾಪ್ತಿಗೆ ತರಬೇಕು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆದು, ಕಾರ್ಮಿಕ ಪರ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಫಲವತ್ತಾದ ಕೃಷಿ ಭೂಮಿಯ ಅಕ್ರಮ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಹಾಗೂ ಲಾಭದಾಯಕ ಬೆಂಬಲ ಬೆಲೆ ನಿಗದಿಪಡಿಸಬೇಕು. ಆಹಾರ, ಆರೋಗ್ಯ, ಶಿಕ್ಷಣ, ವಿದ್ಯುತ್ ಹಾಗೂ ಸಾರಿಗೆ ಸೇರಿದಂತೆ ಯಾವುದೇ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು.
ವಸತಿ ರಹಿತ ಕಾರ್ಮಿಕರಿಗೆ ವಸತಿ ಕಲ್ಪಿಸಬೇಕು ಹಾಗೂ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಗಳನ್ನೂ ಮುಂದಿಟ್ಟರು.
ಈ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು, ಮಹಿಳಾ ನೌಕರರು, ಗುತ್ತಿಗೆ ನೌಕರರು ಹಾಗೂ ದುಡಿಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಸಿಐಟಿಯು ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಮುಖಂಡರಾದ ಎಂ.ಡಿ. ನಾಡಗೌಡ, ಹನುಮೇಶ್ ಕಲ್ಕಂಗಿ, ಮಂಜುನಾಥ ಡಗ್ಗಿ ಹಾಗೂ ಮಹಿಳಾ ಮುಖಂಡೆ ಲಲಿತಾ ಅಂಗಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 