ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ತ್ವರಿತ ಕ್ರಮಕ್ಕೆ ಆಗ್ರಹ
Demand for urgent action to establish a government medical college in Vijayapura district
ವಿಜಯಪುರ 02 : ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಮತ್ತು ರಾಜ್ಯ ಸರ್ಕಾರ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ಸಮಿತಿಯು ಈ ಕೆಳಕಂಡ ಅಂಶಗಳನ್ನು ತಿಳಿಸಿದೆ: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕೆಂಬ ಐತಿಹಾಸಿಕ ಹೋರಾಟವು ಸುಮಾರು 116 ದಿನಗಳ ಕಾಲ ನಡೆಯಿತು.
ಎಲ್ಲ ರಾಜಕೀಯ ಪಕ್ಷಗಳ ಬೇಧಭಾವ ಮರೆತು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಡೆದ ಈ ಹೋರಾಟಕ್ಕೆ ಜಿಲ್ಲೆಯ ಜನತೆ, ವಿವಿಧ ಪ್ರಗತಿಪರ ಸಂಘಟನೆಗಳು, ವಿಕಲಚೇತನರ ಸಂಘಗಳು, ಮಹಿಳಾ ಸಂಘಟನೆಗಳು ಮತ್ತು ಜನಪ್ರತಿನಿಧಿಗಳು ಬೆಂಬಲ ನೀಡಿದ್ದರು.ಜನವರಿ 1ರಂದು ಶಾಂತಿಯುತ ಹೋರಾಟ ನಡೆಸುತ್ತಿದ್ದ 27 ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆ ಹಾಕಿ, 6 ಜನರನ್ನು 14 ದಿನಗಳ ಕಾಲ ಜೈಲಿಗಟ್ಟಿದ್ದ ಘಟನೆಯ ನಂತರ ಜನಹೋರಾಟ ತೀವ್ರಗೊಂಡಿತು. ಇದರ ಹಿನ್ನೆಲೆಯಲ್ಲಿ ಜನವರಿ 9 ರಂದು ವಿಜಯಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿದ್ದರು.2026-27ನೇ ಸಾಲಿನ ಬಜೆಟ್ನಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಆರ್ಥಿಕ ಸಚಿವರಾದ ಸಿದ್ದರಾಮಯ್ಯ ಅವರು ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತೃತ ಯೋಜನಾ ವರದಿ ತಯಾರಿಸುವುದಾಗಿ ಘೋಷಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು “ನಮ್ಮ ಸರ್ಕಾರ ವೈದ್ಯಕೀಯ ಕಾಲೇಜು ಮಾಡಿಯೇ ತೀರುತ್ತದೆ, ಚಿಂತಿಸುವ ಅಗತ್ಯವಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದರು.ಡಿಪಿಆರ್ ತಯಾರಿಕೆಗಾಗಿ ಸಮಿತಿ ರಚಿಸಲಾಗಿದೆ ಎಂಬ ಸುದ್ದಿಯೂ ಮಾಧ್ಯಮಗಳಲ್ಲಿ ವರದಿಯಾಗಿತ್ತು.ಆದರೂ ಇದುವರೆಗೆ ಡಿಪಿಆರ್ ಅನುಮೋದನೆಯಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆಯೇ ಎಂಬ ಮಾಹಿತಿ ಸಾರ್ವಜನಿಕರಿಗೆ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯು ಜಿಲ್ಲಾಧಿಕಾರಿಗಳಲ್ಲಿ "ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ಅನುಮೋದಿತ ವಿಸ್ತೃತ ಯೋಜನಾ ವರದಿಯ ಪ್ರತಿಯನ್ನು" ಸಮಿತಿಗೆ ನೀಡುವಂತೆ ಮತ್ತು ವೈದ್ಯಕೀಯ ಕಾಲೇಜು ಆರಂಭಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಸದಸ್ಯರಾದ ಬಿ. ಭಗವಾನ್ ರೆಡ್ಡಿ ಅವರು "ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಡಿಪಿಆರ್ ತಯಾರಿಸಿ ವರದಿ ಸಲ್ಲಿಸಬೇಕು, ಆದರೆ ಇಲ್ಲಿಯವರೆಗೆ ಡಿಪಿಆರ್ ರಚನೆ ಆಗಿದೆಯೋ ಅಥವಾ ಆಗಿಲ್ಲವೋ ಎಂಬುವುದರ ಬಗ್ಗೆ ಯಾವುದು ಮಾಹಿತಿ ಇಲ್ಲ, ಅದಗೋಸ್ಕರ ಇಂದು ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಡಿಪಿಆರ ತಯಾರು ಆಗಿದ್ರೆ, ಸರ್ಕಾರಕ್ಕೆ ಅದನ್ನು ಸಲ್ಲಿಸಿದ್ರೆ, ಹೋರಾಟ ಸಮಿತಿ ಇಂದು ಪ್ರತಿ ಕೊಡಬೇಕೆಂದು ಮನವಿ ಮಾಡಿದೆವು. ಇದಕ್ಕೆ ಜಿಲ್ಲಾಧಿಕಾರಿಗಳ ಹತ್ತಿರ ಯಾವುದೇ ಸಂದೇಶ ಇಲ್ಲ, ಆದರೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿರಬಹುದು, ತಾಂತ್ರಿಕ ಸಮಿತಿಗೆ ವಹಿಸಿರಬಹುದು. ಇದಕ್ಕೆ ಜಿಲ್ಲಾಧಿಕಾರಿಗಳು ತ್ವರಿತವಾಗಿ ಹೋರಾಟ ಸಮಿತಿಯ ಮನವಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತರಬೇಕು" ಎಂದು ಹೇಳಿದರು.
ಹಿರಿಯ ರೈತ ಹೋರಾಟಗಾರರು ಹಾಗೂ ಸಮಿತಿಯ ಸದಸ್ಯರಾದ ಅರವಿಂದ್ ಕುಲಕರ್ಣಿ ಮಾತನಾಡಿ " 116 ದಿನದ ಹೋರಾಟದ ನಂತರ ಮಾನ್ಯ ಮುಖ್ಯಮಂತ್ರಿಗಳು ಪಿಪಿಪಿ ರದ್ದು ಮಾಡಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದರು. ಹೋರಾಟವನ್ನು ಕೈಬಿಡಿ ಎಂದು ಹೇಳುದಾಗ ನಾವು ನಮನ ಹೋರಾಟವನ್ನು ಹಿಂಪಡೆದಿದ್ದೆವು. ಬಜೆಟ್ ನಲ್ಲಿ ಘೋಷಣೆ ಮಾಡಿದರೂ ಸಹ ಸರ್ಕಾರದ ಹಂತದಲ್ಲಿ ಏನು ಪತ್ರ ವ್ಯವಹಾರ ನಡೆದಿದೆ ಎಂಬುದು ಅರ್ಥ ಆಗುತ್ತಿಲ್ಲ. ಡಿಪಿಆರ್ ತಯಾರಿ ಮಾಡಿ ಕಳುಹಿಸಲಾಗಿದೆ ಎಂಬ ಮಾಹಿತಿ ಇದೆ ಆದರೆ ಇದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದ ಕಾರಣ ವಿಳಂಭ ಮಾಡದೆ ಶೀಘ್ರವಾಗಿ ಡಿಪಿಆರ ತಯಾರಿಸಿ ಅದಕ್ಕೆ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿ ಶೀಘ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನ ಪ್ರಾರಂಭ ಮಾಡಬೇಕು" ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಹೋರಾಟ ಸಮಿತಿಯ ಸದಸ್ಯರುಗಳಾದ ಅನಿಲ್ ಹೊಸಮನಿ, ಚಂದ್ರಶೇಖರ್ ಲೆಂಡಿ, ಅಕ್ರಮ ಮಾಶಾಲ್ಕರ್, ಸುರೇಶ್ ಜೀಬಿ, ಮಲ್ಲಿಕಾರ್ಜುನ್ ಹಂದ್ರಾಳ, ಲಲಿತಾ ಬಿಜ್ಜರಗಿ, ಬಾಬುರಾವ್ ಬೀರಕಬ್ಬಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್. ಟಿ, ಶಿವಬಾಳಮ್ಮ ಕೊಂಡಗೂಳಿ, ಜಗದೇವ್ ಸೂರ್ಯವಂಶಿ, ಲಾಯಪ್ಪ ಇಂಗಳೆ, ಡಾ. ಗುರಿಕಾರ, ಭೀಮು ಉಪ್ಪಾರ, ಸಿದ್ರಾಮ್ ಹಿರೇಮಠ, ಭೋಗೇಶ್ ಸೋಲಾಪುರ್, ಬಾಳು ಜೇವೂರ್, ನೀಲಾಂಬಿಕಾ ಬಿರಾದಾರ, ಶ್ರೀನಾಥ್ ಪೂಜಾರಿ ಹಾಗೂ ಮತ್ತಿರರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 