ಅರ್ಜುನ್ ರಾಠೋಡ್ ಅವರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
Demand to appoint Arjun Rathod as Chairman of the Tanda Development Corporation
ಲೋಕದರ್ಶನ ವರದಿ
ವಿಜಯಪುರ 05 : ಬಂಜಾರ ಸಮಾಜದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾದ ಅರ್ಜುನ್ ರಾಠೋಡ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ವಿಜಯಪುರ ಜಿಲ್ಲಾ ಬಂಜಾರ ಸಮಾಜ ಹಾಗೂ ಕಾಂಗ್ರೆಸ್ ಬಂಜಾರಾ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಚಿವ ರುದ್ರ್ಪ ಲಮಾಣಿ ಹಾಗೂ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಮಾಜದ ಮುಖಂಡರು ಮುಂದಾಗಿದ್ದಾರೆ.
ಅರ್ಜುನ್ ರಾಠೋಡ್ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಂಜಾರ ಸಮಾಜದ ವಿವಿಧ ಸಮಸ್ಯೆಗಳು, ಹಕ್ಕುಗಳು ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ನಿರಂತರವಾಗಿ ಧ್ವನಿ ಎತ್ತಿಕೊಂಡು ಬಂದಿದ್ದಾರೆ.
ಅವರು ಬಂಜಾರ ಮಹಾಸಭೆಯ ಅಧ್ಯಕ್ಷರಾಗಿ ಹಾಗೂ ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ ಸಮಾಜ ಮತ್ತು ಪಕ್ಷದ ಸಂಘಟನೆಗೆ ಸೇವೆ ಸಲ್ಲಿಸಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 