ಆನ್‌ಲೈನ್ ಸೆಂಟರ್‌ಗಳಲ್ಲಿ ಫೋಟೊ ತೆಗೆಯುವುದನ್ನು ನಿಷೇಧಿಸಲು ಒತ್ತಾಯ
Demand to ban photography in online centers
ಹಾವೇರಿ 22: ಗ್ರಾಮ ಒನ್ ಹಾಗೂ ಸಿಎಸ್‌ಸಿ ಆನ್‌ಲೈನ್ ಸೆಂಟರ್‌ಗಳಲ್ಲಿ ಪಾಸ್‌ಪೋರ್ಟ್ ಪೋಟೊ ತೆಗೆಯುವುದನ್ನು ನಿಷೇಧಿಸುವಂತೆ ಒತ್ತಾಯಿಸಿ ಹಾವೇರಿ ತಾಲೂಕು ವೃತ್ತಿನಿರತ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಪಧಾದಿಕಾರಿಗಳು ಗುರುವಾರ ಜಿಲ್ಲಾಕಾರಿಗಳು ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ವೃತ್ತಿನಿರತ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರರ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ ರಿತ್ತಿ ಅವರು, ಹಾವೇರಿ ತಾಲೂಕಿನಾದ್ಯಂತ ಗ್ರಾಮ ಒನ್ ಹಾಗೂ ಸಿಎಸ್‌ಸಿ ಆನ್‌ಲೈನ್ ಸೆಂಟರ್‌ಗಳಲ್ಲಿ ಪಾಸ್‌ಪೋರ್ಟ್ ಸೈಜ್ ಪೋಟೋ ತೆಗೆಯುತ್ತಿರುವುದು ಕಂಡುಬಂದಿದೆ. ಇದು ವೃತ್ತಿನಿರತ ಛಾಯಾಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಲಕ್ಷಾಂತರ ರೂ. ಬಂಡವಾಳ ಹೂಡಿ ರಾಜ್ಯ ಸರಕಾರಕ್ಕೆ ಕಾಲಕಾಲಕ್ಕೆ ತೆರಿಗೆ ಕಟ್ಟುತ್ತಾ ಛಾಯಾಗ್ರಹಣ ವೃತ್ತಿಯನ್ನು ಮಾಡುತ್ತಿದ್ದೇವೆ. ಗ್ರಾಮ ಒನ್, ಸಿಎಸ್‌ಸಿ ಕೇಂದ್ರಗಳಲ್ಲಿ ಪೋಟೊ ತೆಗೆಯುವುದರಿಂದ ವೃತ್ತಿನಿರತ ಛಾಯಾಗ್ರಾಹಕರ ಹೊಟ್ಟೆ ಮೇಲೆ ಬರೆ ಎಳೆದಂತಾಗುತ್ತದೆ. ಆದ್ದರಿಂದ ತಾವುಗಳು ತಾಲೂಕಿನಾದ್ಯಂತ ಗ್ರಾಮ ಒನ್ ಹಾಗೂ ಸಿಎಸ್‌ಸಿ ಕೇಂದ್ರಗಳಲ್ಲಿ ಪೋಟೊ ತೆಗೆಯುವುದನ್ನು ನಿಷೇಸಲು ಕಟ್ಟು ನಿಟ್ಟಾಗಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.ಮನವಿ ನೀಡುವ ವೇಳೆ ಸಂಘದ ತಾಲೂಕಾಧ್ಯಕ್ಷ ಶಂಭನಗೌಡ ಅಂದಾನಿಗೌಡ್ರ, ತಾಲೂಕಾ ಕಾರ್ಯದರ್ಶಿ ಮಾಲತೇಶ ಇಚ್ಚಂಗಿ, ತಾಲೂಕಾ ಉಪಾಧ್ಯಕ್ಷ ಬಸವರಾಜ ಚಾವಡಿ, ಸಂಘದ ಸದಸ್ಯರಾದ ಅಶೋಕ ಬ್ಯಾಡಗಿ, ನಾಗರಾಜ ಹೊಸಮನಿ, ಶಿವಯೋಗಿ ಸೇರಿದಂತೆ ಹಲವರು ಹಾಜರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 