ಹನುಮಾನ ರೈಲ್ವೇ ಕ್ರಾಸಿಂಗ್‌ನಲ್ಲಿ ಮೇಲ್ ಸೇತುವೆ ನಿರ್ಮಿಸಲು ಆಗ್ರಹ ಹಿ ಅವೈಜ್ಞಾನಿಕ ಅಂಡರ್ ಪಾಸ್ ಯೋಜನೆಗೆ ಕರವೇ ಸ್ವಾಭಿಮಾನಿ ಸೇನಾ ಸಮಿತಿಯ ವಿರೋಧ
Demand to build an overhead bridge at Hanuman Railway Crossing, Karave Swabhimani Sena Committee opp
ಲೋಕದರ್ಶನ ವರದಿ
ವಿಜಯಪುರ 30: ವಿಜಯಪುರ ನಗರದ ಬಾಗಲಕೋಟ ರಸ್ತೆಯಲ್ಲಿರುವ ವಜ್ರ ಹನುಮಾನ ದೇವಸ್ಥಾನದ ಸಮೀಪದ ರೈಲ್ವೇ ಕ್ರಾಸಿಂಗ್‌ನಲ್ಲಿ ಸಾರ್ವಜನಿಕರಿಗೆ ದಿನನಿತ್ಯ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಅಂಡರ್ ಪಾಸ್ ಬದಲಾಗಿ ಮೇಲ್ ಸೇತುವೆ ನಿರ್ಮಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನಾ ಸಮಿತಿ ಆಗ್ರಹಿಸಿದೆ.ಈ ಕುರಿತು ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಗಮನಕ್ಕೆ ತಂದಿರುವಂತೆ, ಪ್ರಸ್ತುತ ವಜ್ರ ಹನುಮಾನ ರೈಲ್ವೇ ಕ್ರಾಸಿಂಗ್‌ಗೆ ಅಂಡರ್ ಪಾಸ್ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಅದು ಅವೈಜ್ಞಾನಿಕವಾಗಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಘಟನೆಯ ಪ್ರಕಾರ, ಜುಮನಾಳ ರಸ್ತೆಯ ಟಿ ಆಕಾರದ ಸಂಪರ್ಕವನ್ನು ಪ್ಲಸ್ ಆಕಾರವಾಗಿ ವಿಸ್ತರಿಸಿ, ರಸ್ತೆಯ ಮಧ್ಯಭಾಗದಲ್ಲಿ ಕಾಲಂಗಳನ್ನು ಅಳವಡಿಸಿ ವಜ್ರ ಹನುಮಾನ ರೈಲ್ವೇ ಕ್ರಾಸಿಂಗ್ ಮೇಲೆ ಮೇಲ್ ಸೇತುವೆ ನಿರ್ಮಿಸಿ, ಸರ್ ಎಂ. ವಿಶ್ವೇಶ್ವರಯ್ಯ ಸರ್ಕಲ್ ಸಮೀಪ ಇಳಿಸಿದಲ್ಲಿ ರಾಮನಗರ ರಸ್ತೆ ಹಾಗೂ ಬಾಗಲಕೋಟ ರಸ್ತೆ ಸಂಪರ್ಕ ಸುಲಭವಾಗಲಿದೆ ಎಂದು ತಿಳಿಸಲಾಗಿದೆ.ಇದರ ಜೊತೆಗೆ, ರೈಲ್ವೇ ಕ್ರಾಸಿಂಗ್‌ನಲ್ಲಿ ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತಿರುವುದರಿಂದ ತುರ್ತು ವೈದ್ಯಕೀಯ ಸೇವೆಗಳ ಅಂಬುಲೆನ್ಸ್‌ಗಳು, ಅಗ್ನಿಶಾಮಕ ವಾಹನಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಮೇಲ್ ಸೇತುವೆ ನಿರ್ಮಾಣದ ಕುರಿತು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸಹ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಲಾಗಿದೆ.
ಆದರೆ, ಪ್ರಸ್ತುತ ಅಂಡರ್ ಪಾಸ್ ನಿರ್ಮಾಣದ ಯೋಜನೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಸಂಬಂಧಪಟ್ಟ ಉನ್ನತ ಅಭಿಯಂತರರು ಹಾಗೂ ಅಧಿಕಾರಿಗಳೊಂದಿಗೆ ಪುನರ್ ಪರೀಶೀಲನೆ ನಡೆಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಮೇಲ್ ಸೇತುವೆ ನಿರ್ಮಾಣ ಯೋಜನೆ ರೂಪಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ರೂಪುರೇಷೆ ರೂಪಿಸಲಾಗುವುದು ಎಂದು ಸಂಘಟನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನಾ ಸಮಿತಿಯ ರಾಜ್ಯಾಧ್ಯಕ್ಷ ಶ್ರೀ ಜಗದೇವ ಎಸ್. ಸೂರ್ಯವಂಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಂ.ಆರ್. ಗುರಿಕಾರ, ರಾಜ್ಯ ಖಜಾಂಚಿ ಎಂ.ಆರ್. ಸೌದಾಗಾರ್, ರಾಜ್ಯ ಪದಾಧಿಕಾರಿ ಶಂಕರ್ ಸಾತಪುತೆ, ರಾಜ್ಯ ಸಮಿತಿ ಮಹಿಳಾ ಸದಸ್ಯೆ ನೀಲಾಂಬಿಕ ಕಟ್ಟಿಮನಿ ಸೇರಿದಂತೆ ಸಂಘಟನೆಯ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 