ವಿಶ್ವಕರ್ಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಒತ್ತಾಯ
Demand to celebrate Vishwakarma Jayanti on a grand scale
ಲೋಕದರ್ಶನ ವರದಿ
ಶಿಗಾಂವಿ 10: ಪಟ್ಟಣದ ಪ್ರಮುಖ ಸರ್ಕಲ್ನಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಕಂಚೇರಿ ಶಿಲ್ಪಾಚಾರ್ಯರ ಮೂರ್ತಿಯನ್ನು ಸ್ಥಾಪಿಸುವಂತೆ ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಕಾಳಪ್ಪ ಬಡಿಗೇರ ಒತ್ತಾಯಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ನಡೆದ ತಾಲೂಕು ಆಡಳಿತದಿಂದ ಇದೇ 17ರಂದು ಆಚರಿಸಲಿರುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಕರ್ಮರ ಮಹತ್ವ ಹಾಗೂ ಆದರ್ಶಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಜತೆಗೆ, ತಾಲೂಕಿನ ಪ್ರತಿಯೊಂದು ಶಾಲೆಯಲ್ಲಿಯೂ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಅವರು ಮನವಿ ಮಾಡಿದರು.
ಶಿರಸ್ತೇದಾರ್ ವಿ.ಎಂ. ತಿಪ್ಪಣ್ಣ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ವಿಶ್ವಕರ್ಮ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.
ಮುಖಂಡ ನಿಂಗಪ್ಪ ಕಮ್ಮಾರ ಮಾತನಾಡಿ, ವಿಶ್ವಕರ್ಮರ ಆದರ್ಶಗಳನ್ನು ಬಿತ್ತುವ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ತಾಲೂಕು ಆಡಳಿತದಿಂದ ನಡೆಯಲಿರುವ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಶಿವಾನಂದ ಸಣ್ಣಕ್ಕಿ, ಮುಖಂಡರಾದ ಮನೋಹರ ಸಾಂಶಿ, ನಾರಾಯಣಪ್ಪ ಬಡಿಗೇರ, ಬಂಕಪ್ಪ ಬಡಿಗೇರ, ಮೈಲಾರ್ಪ ಕಮ್ಮಾರ, ಮಾಲತೇಶ ಕಮ್ಮಾರ, ಶಂಕರ್ಪ ಬಡಿಗೇರ, ಚನ್ನಪ್ಪ ಬಡಿಗೇರ, ಮಾಲತೇಶ ಕಮ್ಮಾರ, ಮೋಹನ್ ಕಮ್ಮಾರ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 