ವಿಜಯಪುರ

ಅನಧಿಕೃತ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಆಗ್ರಹ

ಅನಧಿಕೃತ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಆಗ್ರಹ

ಕೊಲ್ಹಾರ 01 : ತಾಲ್ಲೂಕಿನಲ್ಲಿ ಅನಧಿಕೃತ ಆಸ್ಪತ್ರೆಗಳು ಹಾಗೂ ನಕಲಿ ವೈದ್ಯರ ಚಟುವಟಿಕೆಗಳು ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಇವುಗಳ ವಿರುದ್ಧ ಶಾಶ್ವತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಲ್ಹಾರ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ ತುಪ್ಪದ ಆಗ್ರಹಿಸಿದ್ದಾರೆ.  ಅರ್ಹತೆ ಇಲ್ಲದವರು ಆಸ್ಪತ್ರೆ ನಡೆಸಿ ಚಿಕಿತ್ಸೆ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆರೋಗ್ಯ ಇಲಾಖೆ ನೀಡುವ ನೋಟಿಸ್ಗಳನ್ನೂ ಲೆಕ್ಕಿಸದೆ ಆಸ್ಪತ್ರೆಗಳು ಮತ್ತೆ ಕಾರ್ಯಾರಂಭ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ. 


ಸುದ್ದಿ ಓದಿ