ಬೈಲಹೊಂಗಲ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ
Demand to declare Bailhongal taluk drought-hit
ಬೈಲಹೊಂಗಲ, ಸೆ. 9: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡಬೇಕು, ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಬೈಲಹೊಂಗಲ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ತಾಲೂಕು ಘಟಕದ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಗುರು ಮೆಟಗುಡ್ಡ ನೇತೃತ್ವದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಪದಾಧಿಕಾರಿಗಳು, ಈ ವರ್ಷ ಮಳೆ ಕೊರತೆಯಿಂದ ತಾಲೂಕಿನಾದ್ಯಂತ ಬರ ಪರಿಸ್ಥಿತಿ ತಲೆದೋರಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಮಾತ್ರವಲ್ಲದೆ, ಅವರನ್ನು ಅವಲಂಬಿಸಿರುವ ಕುಟುಂಬಗಳು ಹಾಗೂ ಜಾನುವಾರುಗಳಿಗೂ ಕುಡಿಯುವ ನೀರು ಮತ್ತು ಮೇವಿನ ಕೊರತೆ ಎದುರಾಗಿದೆ ಎಂದು ಹೇಳಿದರು.
ಮಳೆ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆ ನಾಶವಾಗಿದ್ದು, ರೈತರು ಮತ್ತು ರೈತರನ್ನು ಅವಲಂಬಿಸಿರುವ ಕುಟುಂಬಗಳು ಜೀವನ ನಡೆಸುವುದು ಕಷ್ಟಕರವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬೈಲಹೊಂಗಲ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ಅಗತ್ಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬೈಲಹೊಂಗಲ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು. ರೈತ ಸಮುದಾಯವನ್ನು ಉಳಿಸಲು ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಮುಂಗಾರು ಬೆಳೆಗೆ ಬಿತ್ತನೆ ಬೀಜ ಸೇರಿದಂತೆ ವಿವಿಧ ಕೃಷಿ ಸಾಮಗ್ರಿಗಳನ್ನು ಖರೀದಿಸಲು ರೈತರು ಮಾಡಿರುವ ವೆಚ್ಚವನ್ನು ಪರಿಗಣಿಸಿ, ಹಿಂಗಾರು ಹಂಗಾಮಿಗೆ ಸರ್ಕಾರ ಸಂಪೂರ್ಣ ಉಚಿತವಾಗಿ ಬಿತ್ತನೆ ಬೀಜ ಹಾಗೂ ಅಗತ್ಯ ಪರಿಕರಗಳನ್ನು ಒದಗಿಸಬೇಕು. ಬರ ನಿರ್ವಹಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ ?10 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬರ ನಿರ್ವಹಣೆಗೆ ಅಗತ್ಯವಿರುವ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸಬೇಕು. ರೈತರ ಕೃಷಿ ಪಂಪ್ಸೆಟ್ಗಳಿಗೆ ಕನಿಷ್ಠ ಏಳು ಗಂಟೆಗಳ ಕಾಲ ನಿರಂತರವಾಗಿ ಗುಣಮಟ್ಟದ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಪಂಪ್ಸೆಟ್ಗಳ ವಿದ್ಯುತ್ ಪರಿವರ್ತಕಗಳು ಸುಟ್ಟು ಅಥವಾ ಕೆಟ್ಟುಹೋದರೆ ತಕ್ಷಣವೇ ಬದಲಾಯಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಭೂ ಕಂದಾಯವನ್ನು ಮನ್ನಾ ಮಾಡಬೇಕು. ಎಲ್ಲ ವರ್ಗದ ರೈತರು ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಮೇಲಿನ ಬೇಡಿಕೆಗಳಿಗೆ ತಕ್ಷಣ ಕ್ರಮ ಕೈಗೊಂಡು, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಹಾಗೂ ಕೃಷಿಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಉಪಾಧ್ಯಕ್ಷ ಶಂಕರಗೌಡ ದೊಡಗೌಡ್ರ, ನಿರ್ದೇಶಕರಾದ ಶಿವಪುತ್ರ್ಪ ತಟವಾಟಿ, ನಾಗನಗೌಡ ಭರಮಗೌಡರ, ಪ್ರಕಾಶ ಕಾರಿಮನಿ, ಮಹಾಂತೇಶ ಅಕ್ಕಿ, ಬಸವರಾಜ ಶಿಂತ್ರಿ, ಸೋಮನಗೌಡ ಪಾಟೀಲ, ಬಸಪ್ಪ ಕರವೀರನವರ್, ಶ್ರೀಶೈಲ ಹೊಸೂರ, ಕುಮಾರ ಹೊಸಮನಿ, ವಿನಾಯಕ ಕಬ್ಬಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 