ದೇವರಹಿಪ್ಪರಗಿ ಬರಪೀಡಿತ ತಾಲೂಕುಗಳೆಂದು ಘೋಷಿಸಲು ಆಗ್ರಹ
Demand to declare Devarahipparagi as a drought-hit taluk
ತಾಳಿಕೋಟಿ 29 : ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ತಕ್ಷಣ ತೀವ್ರ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ಬಸನಗೌಡ ಎಸ್. ಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರ ಕೂಡಲೇ ಸಮಗ್ರ ಬೆಳೆ ಸಮೀಕ್ಷೆ ನಡೆಸಿ ಅರ್ಹ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು.
ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಹಾಗೂ ಕೆರೆಗಳನ್ನು ತುಂಬಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಮಧ್ಯಂತರ ಪರಿಹಾರ ಮತ್ತು ಬೆಳೆ ವಿಮೆ ಮೊತ್ತವನ್ನು ವಿಳಂಬವಿಲ್ಲದೆ ಪಾವತಿಸಬೇಕು. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ರೈತರ ಪರವಾಗಿ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 