ವಿಜಯಪುರ

ಸಿಂದಗಿ, ಆಲಮೇಲ ಬರಗಾಲ ಘೋಷಣೆಗೆ ಆಗ್ರಹ

ಸಿಂದಗಿ, ಆಲಮೇಲ ಬರಗಾಲ ಘೋಷಣೆಗೆ ಆಗ್ರಹ


ಆಲಮೇಲ 29: ವಿಜಯಪುರ ಜಿಲ್ಲೆಯ ಆಲಮೇಲ ಹಾಗೂ ಸಿಂದಗಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ರಮೇಶ ಬೂಸನೂರ, ಕಾಂಗ್ರೆಸ್ ಸರ್ಕಾರ ವಿಜಯಪುರ ಜಿಲ್ಲೆಯ ಮೂರು ತಾಲೂಕುಗಳನ್ನು ಮಾತ್ರ ಬರಗಾಲವೆಂದು ಘೋಷಿಸಿ ಉಳಿದ ತಾಲೂಕುಗಳನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಮುಂಗಾರು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಆಲಮೇಲ ಮತ್ತು ಸಿಂದಗಿ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ ರೈತರಿಗೆ ಪರಿಹಾರ ಹಾಗೂ ಬೆಳೆ ವಿಮೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಬರಗಾಲ ಘೋಷಿಸದಿದ್ದರೆ ರೈತರೊಂದಿಗೆ ನಿರಂತರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ