ಪರವಾನಿಗೆ ಭೂ ಮಾಪಕರ ಬೇಡಿಕೆ ಈಡೇರಿಸಲು ಆಗ್ರಹ
Demand to fulfill the demand of licensed land surveyors
ಲೋಕದರ್ಶನ ವರದಿ
ಹೂವಿನಹಡಗಲಿ 02: ಭೂಮಾಪಕರ ಕೊರತೆಯಿಂದ ರೈತರು ಜಮೀನು ಅಳತೆ, ಗಡಿ ಗುರುತು, ದಾಖಲೆ ತಿದ್ದುಪಡಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಶ್ರೀಧರ ನಾಯ್ಕ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಭೂಮಾಪಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ರೈತರಿಗೆ ಸಕಾಲಕ್ಕೆ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಆಸ್ತಿ ಭದ್ರತೆ, ಸಾಮಾಜಿಕ ನ್ಯಾಯ ಹಾಗೂ ಗ್ರಾಮೀಣ ಜನರ ಮೂಲಭೂತ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಕ್ರಮವಹಿಸಬೇಕು ಎಂದು ಅವರು ಹೇಳಿದರು.
ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡ ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಬೆನ್ನೂರು ಹಾಲೇಶ, ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ವಿ.ಬಿ. ಸೋಮಶೇಖರ್ಪ, ಜಿಲ್ಲಾಧ್ಯಕ್ಷ ಶಿವಾನಂದಪ್ಪ, ತಾಲೂಕು ಅಧ್ಯಕ್ಷ ಶಂಭುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 