ಬಳ್ಳಾರಿ

ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ಬಳ್ಳಾರಿ.12 ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮ್ಮೀರ ಅಹ್ಮದ ಅವರ ಅನುಪಸ್ಥಿತಿಯಲ್ಲಿ ಖಾಲಿ ಕುರ್ಚಿಗೆ ಜಿಲ್ಲಾಧಿಕಾರಿ ಕಛೇರಿ  ಮುಂದೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.  

ಎಬಿವಿಪಿಯ ರಾಜ್ಯಸಹ ಕಾರ್ಯದರ್ಶಿ ವಿನೋದ ರಾಂಪೂರ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ,  ರಾಜ್ಯದಲ್ಲಿ ಶಾಲಾ  ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣವನ್ನ ಸೃಷ್ಟಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ ಎಂದರು.  

ಸ್ತ್ರೀ ಶಕ್ತಿ ಯೋಜನೆಯಿಂದ ಅತಿ ಹೆಚ್ಚು ಮಹಿಳೆಯರು ಬಸ್ ಗಳಲ್ಲಿ ಓಡಾಟ ಮಾಡುತ್ತಿರುವದರಿಂದ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.  

ಬೇಡಿಕೆಗಳು ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು, ಶಾಲಾ- ಕಾಲೇಜುಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತಾಗಬೇಕು.  ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು,ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು, ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿಯನ್ನು ಸಮರ​‍್ಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು, ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ  ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು,ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಹಾಗೂ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡವನ್ನ ನೀಡಬೇಕು, ಎಸ್ ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ ಖಅಕ ಮತ್ತು ಖಿಖಕ ಅನುದಾನದಿಂದ ಹಲವಾರು ಸೌಲಭ್ಯಗಳನ್ನ ನೀಡಲಾಗುತ್ತದೆ, ಅನುದಾನವನ್ನ ಬೇರೆ ಕಡೆ ಬಳಕೆ ಮಾಡಿರುವ ಕುರಿತು ಸರ್ಕಾರ ಸ್ಪಷ್ಟತೆ ನೀಡಬೇಕು ಹಾಗೂ ಎಲ್ಲ ಬೇಡಿಕೆಗಳನ್ನು ಇಡೆರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು.  

ಈ ಸಂದರ್ಭದಲ್ಲಿ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ನಾಗರಾಜ ಬಟಗೇರಾ , ತಾಲೂಕು ಸಂಚಾಲಕ ಓಂಕಾರಗೌಡ,ನವೀನ,ಮಾರುತಿ,ಸಾಗರ,ಪವನ,ದರ್ಶನ,ಸಾಗರ, ಬಿ,ಭದ್ರಿಗೌಡ, ಅನಿರುದ್, ಭರತ್, ನರೇಂದ್ರ, ವೆಂಕಟೇಶ ಚನ್ನಬಸವ ಹಾಗೂ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ