ವಿಜಯಪುರ

ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

ಲೋಕದರ್ಶನ ವರದಿ 

ಕೊಲ್ಹಾರ 03: ಬಸವನ ಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಸವನಬಾಗೇವಾಡಿ ತಾಲೂಕಿನ ಮಹಿಳಾ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕೊಲ್ಹಾರ ತಾಲೂಕ ಸದಸ್ಯರಾದ ಕಮಲಾ ಮಾಕಾಳಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಶಿವಾನಂದ ಪಾಟೀಲರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ರಾಜ್ಯದ ಅಭಿವೃದ್ಧಿಗೆ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ ಜನಪರ ನಾಯಕರಾಗಿ ಹಾಗೂ ಅಭಿವೃದ್ಧಿ ಪರ ಚಿಂತಕರಾಗಿ ಹಲವು ಬಾರಿ ಶಾಸಕರಾಗಿ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸುವ ಮೂಲಕ ಸೇವೆ ಸಲ್ಲಿಸಿದ್ದಾರೆ ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶಿವಾನಂದ ಪಾಟೀಲವರಿಗೆ ಲಿಂಗಾಯತ ಕೋಟಾದಡಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸಮಗ್ರ ವಿಜಯಪುರ ಜಿಲ್ಲೆಯ ಹಾಲುಮತ ಸಮಾಜದಿಂದ ಮನವಿ ಮಾಡಿದ್ದಾರೆ 


ಸುದ್ದಿ ಓದಿ