ನಾಡಗೌಡರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ
Demand to give Nadagowda a ministerial position
ತಾಳಿಕೋಟಿ 20: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಸಿ.ಎಸ್. ನಾಡಗೌಡ ಅಪ್ಪಾಜಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ(ರಿ) ತಾಲೂಕಾಧ್ಯಕ್ಷ ಜುಮ್ಮಣ್ಣ ನಾಲತವಾಡ ಆಗ್ರಹಿಸಿದ್ದಾರೆ, ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ನಾಡಗೌಡರನ್ನು ಉದ್ದೇಶಪೂರ್ವಕವಾಗಿ ಸಚಿವ ಸಂಪುಟದಿಂದ ದೂರವಿಡಲಾಗುತ್ತಿದೆ ಎಂದು ಭಾಸವಾಗುತ್ತಿದೆ ಇದು ನಿಜಕ್ಕೂ ಕಳವಳಕಾರಿಯಾದ ವಿಷಯವಾಗಿದೆ.
ನಾಡಗೌಡರು ಹಲವು ಪ್ರಮುಖ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದು, ನಷ್ಟದಲ್ಲಿದ್ದ ಕೆಎಸ್ಡಿಎಲ್ ಸಂಸ್ಥೆಯನ್ನು ಲಾಭದ ಹಾದಿಗೆ ತಂದಿದ್ದಾರೆ. 2023ರ ಚುನಾವಣಾ ಹೊಸ್ತಿಲಲ್ಲಿ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಗೌಡರಿಗೆ ಸಚಿವ ಸ್ಥಾನ ಸಿಗುವ ಎಲ್ಲಾ ಅವಕಾಶಗಳಿವೆ ಎಂದು ಭರವಸೆ ನೀಡಿದ್ದರು. ಆದರೆ ಇದುವರೆಗೆ ಸಚಿವ ಸ್ಥಾನ ನೀಡದಿರುವುದು ಕ್ಷೇತ್ರದ ಜನರಲ್ಲಿ ತೀವ್ರ ನೋವುಂಟು ಮಾಡಿದೆ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ನಾಡಗೌಡರ ಹೆಸರನ್ನು ಪರಿಗಣಿಸದಿದ್ದರೆ ಕ್ಷೇತ್ರದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 