ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ Demand to give Shivanand Patil the post of DCM

ಲೋಕದರ್ಶನ ವರದಿ 

ವಿಜಯಪುರ 02: ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವಾನಂದ ಎಸ್ ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಟಾನ ಸಂಚಾಲಕರಾದ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ. 

ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸೆಂಟರ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತಾಜಬಾವಡಿಯಿಂದ ನೀರಿನ ಸಂಪರ್ಕ ಒದಗಿಸಿ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಮೇಲದರ್ಜೆಗೆ ಏರಿಸಿದ್ದಾರೆ, ಜೊತೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿವಿಧ ಮೂಲಭೂತ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. 

ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಕಬ್ಬು ಸಕ್ಕರೆ ಮತ್ತು ಜವಳಿ ಸಚಿವರಾಗಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಹಲವು ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಅನುಭವಿ ಜನಪರ ಕಾಳಜಿವುಳ್ಳ ನಾಯಕರಾಗಿರುವ ಶಿವಾನಂದ ಪಾಟೀಲರಿಗೆ ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಡಿಸಿಎಂರನ್ನಾಗಿ ಮಾಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕೆಂದು ಆಗ್ರಹಿಸಿದ ಅವರು ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದ್ದಾರೆ.