ಸಿದ್ದು ಕೊಣ್ಣೂರಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ! ಉತ್ತರ ಕರ್ನಾಟಕದ ನಾಯಕರಿಗೆ ಸೂಕ್ತ ಗೌರವ ಸಿಗಲಿ! ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ!
Demand to give Siddu Konnur the post of Corporation-Board President! Leaders of North Karnataka shou
ಲೋಕದರ್ಶನ ವರದಿ
ಮಹಾಲಿಂಗಪುರ 04: ಉತ್ತರ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಆರ್.ಬಿ. ತಿಮ್ಮಾಪುರ್ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು. ಅದೇ ವೇಳೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡ ಸಿದ್ದು ಕೊಣ್ಣೂರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಬೇಕು ಎಂದು ರಬಕವಿ-ಬನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಹೇಳಿದರು. ಪಟ್ಟಣದ ಜಿಎಲ್ ಬಿಸಿ ಅತಿಥಿ ಗೃಹದಲ್ಲಿ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಬಿ. ತಿಮ್ಮಾಪುರ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗಾಗಿ ಶ್ರಮಿಸಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಚಿವರಾಗಿ ಅವರು ಜನಪರ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಿದ್ದು, ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ರಾಜಕೀಯ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಪುರಸಭೆ ಸದಸ್ಯ ಬಲವಂತಗೌಡ ಪಾಟೀಲ ಹಾಗೂ ಹಿರಿಯ ಮುಖಂಡ ಶ್ರೀಪಾದ ಗುಂಡಾ ಮಾತನಾಡಿ, ಸಿದ್ದು ಕೊಣ್ಣೂರ ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ತಮ್ಮನ್ನು ಸಮರ್ಿಸಿಕೊಂಡಿದ್ದು, ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು. ಪಕ್ಷದ ಕಷ್ಟಕಾಲದಲ್ಲಿಯೂ ಸಂಘಟನೆಯನ್ನು ಉಳಿಸಿ ಬೆಳೆಸುವಲ್ಲಿ ಅವರು ತೋರಿದ ಬದ್ಧತೆ ಮತ್ತು ನಿಷ್ಠ್ಠೆ ಮಾದರಿಯಾಗಿದೆ ಎಂದು ಪ್ರಶಂಸಿಸಿದರು. ಜೊತೆಗೆ ಪಕ್ಷಕ್ಕಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುವುದು ಅಗತ್ಯವಾಗಿದೆ. ಆದ್ದರಿಂದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವರಿಷ್ಠರು ಆರ್.ಬಿ. ತಿಮ್ಮಾಪುರ್ ಅವರಿಗೆ ಡಿಸಿಎಂ ಸ್ಥಾನ ಹಾಗೂ ಸಿದ್ದು ಕೊಣ್ಣೂರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಬೇಕು ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಮಹಾಲಿಂಗ ಮಾಳಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಹೊಳೆಪ್ಪ ಬಾಡಗಿ, ಮುಸ್ತಾಕ್ ಚಿಕ್ಕೋಡಿ, ಅಬ್ದುಲ್ ಬಾಗವಾನ್, ಸುನಿಲಗೌಡ ಪಾಟೀಲ, ಮಂಜು ಬಕರೆ,ನಜೀರ್ ಜಾರೆ, ನಜೀರ್ ಅತ್ತಾರ, ವಿಠ್ಠಲ ಕುಳಲಿ, ನಾರಾಯಣ ಜೋಶಿ, ವಿನೋದ ಸಿಂಪಿ, ಲಕ್ಷ್ಮಣ್ ಮಾಂಗ, ಅರ್ಜುನ ದೊಡಮನಿ, ಆನಂದ ಬಂಡಿ, ರಿಯಾಜ್ ಪಂಡಾರಿ, ದಾದಾಪೀರ್ ಸನದಿ, ಮಹಾಲಿಂಗ ಕಲಾಗತಿ, ಮಹಾಲಿಂಗ ಇಂಗಳಗಿ, ಅಪ್ಪಾಸಾಬನ ನಾಲಬಂದ, ಪರಶುರಾಮ ಮೇತ್ರಿ, ಹನುಮಂತ ಬಂಡಿವಡ್ಡರ, ಸಿದ್ದು ಭೂಷಣ್ಣವರ, ಮಹಾಲಿಂಗ ಭಜಂತ್ರಿ ಸೇರಿದಂತೆ ಇತರರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 