ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial berth to Shivanand Patil
ಲೋಕದರ್ಶನ ವರದಿ
ವಿಜಯಪುರ 02 : ಮಾಜಿ ಸಚಿವರು ಹಾಗೂ ಬಸವನ ಬಾಗೇವಾಡಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವಾನಂದ ಎಸ್ ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ವೈದ್ಯಕೀಯ ಶಿಕ್ಷಣ ಖಾತೆಯನ್ನು ನೀಡಬೇಕು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಟಾನ ಸಂಚಾಲಕರಾದ ಅನಿಲ ಹೊಸಮನಿ ಹಾಗೂ ಕಾರ್ಯದರ್ಶಿ ಲಾಯಪ್ಪ ಇಂಗಳೆ ಆಗ್ರಹಿಸಿದ್ದಾರೆ.
ಈ ಹಿಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ -ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸೆಂಟರ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಗೆ ತಾಜಬಾವಡಿಯಿಂದ ನೀರಿನ ಸಂಪರ್ಕ ಒದಗಿಸಿ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಮೇಲದರ್ಜೆಗೆ ಏರಿಸಿದ್ದಾರೆ, ಜೊತೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ವಿವಿಧ ಮೂಲಭೂತ ಸೌಲಭ್ಯ ಒದಗಿಸಿ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.
ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ, ಕಬ್ಬು ಸಕ್ಕರೆ ಮತ್ತು ಜವಳಿ ಸಚಿವರಾಗಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಹಲವು ರೈತಪರ, ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಶಿವಾನಂದ ಪಾಟೀಲರಿಗೆ ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಚಿವರನ್ನಾಗಿ ಮಾಡಿ ವೈದ್ಯಕೀಯ ಶಿಕ್ಷಣ ಸಚಿವರನ್ನಾಗಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 