ಹೆಚ್ ಕೆ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to H.K. Patil
ಶಿರಹಟ್ಟಿ 08: ಉತ್ತರ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಜನಸ್ಪಂಧನೆಯ ನಾಯಕರಾದ ಎಚ್ . ಕೆ . ಪಾಟೀಲ್ ಅವರಿಗೆ ಡಿ ಕೆ ಶಿವಕುಮಾರ ರವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಫಕ್ಕೀರೇಶ ನಡುವಿಕೇರಿ ಹೇಳಿದರು. ಎಚ್. ಕೆ. ಪಾಟೀಲರು ಅವರು ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಕಷ್ಟದ ಸಂದರ್ಭಗಳಲ್ಲಿಯೂ ನಿಷ್ಠೆಯಿಂದ ಪಕ್ಷದ ಪರವಾಗಿ ನಿಂತು ಸಂಘಟನೆಯನ್ನು ಬಲಪಡಿಸಿದ್ದಾರೆ ಎಂದರು. ಅಲ್ಲದೆ ಅವರ ರಾಜಕೀಯ ಅನುಭವ, ಆಡಳಿತಾತ್ಮಕ ಜ್ಞಾನ, ಪ್ರಾಮಾಣಿಕತೆ ಹಾಗೂ ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದರು. ನಂತರ ಎಚ್. ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದರಿಂದ ಉತ್ತರ ಕರ್ನಾಟಕದ ಜನರ ಆಶಯಗಳಿಗೆ ಗೌರವ ದೊರೆಯುವುದರ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನವ ಚೈತನ್ಯ ಉತ್ಸಾಹ ಮತ್ತು ವಿಶ್ವಾಸ ಮೂಡಲಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 