ಶಾಸಕ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಲು ಆಗ್ರಹ
Demand to give ministerial position to MLA Laxman Savadi
ತಾಳಿಕೋಟಿ 01 : ಗಾಣಿಗ ಸಮಾಜದ ಅಧ್ಯಕ್ಷರಾದ ಪ್ರಕಾಶ್ ಸಜ್ಜನ ಅವರು ಶಾಸಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಅಥಣಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಅನುಭವಿ ನಾಯಕರದ ಲಕ್ಷ್ಮಣ ಸವದಿ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ತಕ್ಷಣವೇ ಸಚಿವ ಸ್ಥಾನ ನೀಡಬೇಕು ಎಂದು ಅವರು ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಲಕ್ಷ್ಮಣ ಸವದಿ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಧೀಮಂತ ನಾಯಕರಾಗಿದ್ದಾರೆ.
ಈ ಹಿಂದೆ ಸಚಿವರಾಗಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಅವರು ನೀಡಿದ ಆಡಳಿತಾತ್ಮಕ ಕೊಡುಗೆ ಅಪಾರ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದ ಅವರು ಇಡೀ ಉತ್ತರ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಯ ಧ್ವನಿಯಾಗಿದ್ದಾರೆ ಎಂದೂ ಹೇಳಿದ್ದಾರೆ. ಗಾಣಿಗ ಸಮಾಜ ಸೇರಿದಂತೆ ಹಿಂದುಳಿದ ವರ್ಗಗಳ ಮತ್ತು ಇಡೀ ಉತ್ತರಕರ್ನಾಟಕದ ನೀರಾವರಿ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ವೇಗ ಸಿಗಬೇಕಾದರೆ ಸವದಿ ಅವರಂತಹ ಅನುಭವಿಗಳ ಅಗತ್ಯ ಸರ್ಕಾರಕ್ಕೆ ಇದೆ ಜನಸಾಮಾನ್ಯರ ನೋವಿಗೆ ತಕ್ಷಣ ಸ್ಪಂಧಿಸುವ ಶಕ್ತಿಯ ಅವರಿಗಿದೆ ಆದ್ದರಿಂದ ಮುಂಬರುವ ದಿನಮಾನಗಳಲ್ಲಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಯಾವುದೇ ವಿಳಂಬ ಮಾಡದೆ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಮತ್ತು ಪ್ರಮುಖ ಖಾತೆಯನ್ನು ಜವಾಬ್ದಾರಿಯಾಗಿ ನೀಡಬೇಕು ಎಂದು ಪ್ರಕಾಶ ಸಜ್ಜನ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 